Friday, July 17, 2026
22 C
Belagavi

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ-ಮುಖ್ಯಮಂತ್ರಿ ಸಿದ್ದರಾಮಯ್ಯ

advertisement

spot_img

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ-ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ,  : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು.

ಉಪಚುನಾವಣೆಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಾತಾವರಣ ಪೂರಕವಾಗಿದೆ. ದಿವಂಗತ ಹೆಚ್.ವೈ.ಮೇಟಿಯವರು ಬಾಗಲಕೋಟೆಯ ಅಭಿವೃದ್ಧಿಗೆ ಶ್ರಮವಹಿಸಿದ್ದರು. ಮೇಟಿಯವರು ಎಲ್ಲ ವರ್ಗದವರ ಏಳಿಗೆಗಾಗಿ ಸೇವೆ ಸಲ್ಲಿಸಿದ ಅಜಾತಶತ್ರುವಾಗಿದ್ದರು. ಸರಳ, ಸಜ್ಜನ ಮೇಟಿಯವರ ಅವರ ನಿಧನದಿಂದ ಖಾಲಿಯಾಗಿರುವ ಶಾಸಕ ಸ್ಥಾನಕ್ಕೆ ಅವರ ಮಗನೇ ಆದ ಉಮೇಶ್ ಮೇಟಿಯವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಬಾಗಲಕೋಟೆಯಲ್ಲಿ ಅವರ ಗೆಲ್ಲುವ ವಿಶ್ವಾಸವಿದೆ ಎಂದರು.ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನವರೇ ಆಗಿದ್ದ ಪೈಲ್ವಾನ್ ಸಾದಿಕ್ ಅವರ ಮನವೊಲಿಸಿ ಕಣದಿಂದ ಹಿಂದೆ ಸರಿಯುವಂತೆ ಮಾಡಲಾಗಿದೆ. ಸಚಿವ ಜಮೀರ್ ಅಹ್ಮದ್ ಅವರೂ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಬಿಜೆಪಿಯವರು ಸೋಲಿನ ಭೀತಿಯಲ್ಲಿದ್ದಾರೆ

ಸೋಲಿನ ಭಯದಿಂದ ಸಿಎಂ ಅವರು ಬಾಗಲಕೋಟೆಯಲ್ಲಿ ಹೆಚ್ಚಿನ ಪ್ರಚಾರ ಕೈಗೊಂಡಿದ್ದಾರೆ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಸೋಲಿನ ಭೀತಿಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಿಧನ ಹೊಂದಿದ ಶಾಸಕರ ಕುಟುಂಬದವರಿಗೆ ಟಿಕೆಟ್ ನೀಡುವುದು ಕಾಂಗ್ರೆಸ್ ಪಕ್ಷದ ಪ್ರತೀತಿಯಾಗಿದ್ದು, ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ನಿಧನ ಹೊಂದಿದ ಶಾಸಕರ ಕುಟುಂಬದವರಿಗೆ ಟಿಕೆಟ್ ನೀಡಲಾಗಿದೆ ಎಂದರು.

ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ

ಸಿಎಂ ಸ್ಥಾನದ ಬಗ್ಗೆ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿಯವರು ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಪಕ್ಷದ ಹೈಕಮಾಂಡ್ ನ ನಿರ್ಧಾರಗಳಿಗೆ ಬದ್ಧನಾಗಿರುತ್ತೇನೆ. ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಬಿಜೆಪಿ ಅವಧಿಯಲ್ಲಿ ಬಾಗಲಕೋಟೆ ಅಭಿವೃದ್ಧಿಯಾಗಿಲ್ಲ

ಬಿಜೆಪಿಯವರು ತಮ್ಮ ಅವಧಿಯಲ್ಲಿ ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಲೀ, ಕೃಷ್ಣಾ ಮೇಲ್ದಂಡೆ ಯೋಜನೆಯಡಿ ರೈತರಿಗೆ ಪರಿಹಾರ ನೀಡಲು ಆದ್ಯತೆ ನೀಡಲಿಲ್ಲ. ಬಾಗಲಕೋಟೆಯ ಅಭಿವೃದ್ಧಿಗೆ ಹೆಚ್.ವೈ.ಮೇಟಿಯವರ ಕೊಡುಗೆ ಅನನ್ಯವಾಗಿದೆ ಎಂದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img