Thursday, August 13, 2026
25.1 C
Belagavi

ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ

advertisement

spot_img

ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ

ರಾಮದುರ್ಗ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತಗೊಂಡ ಕೊಠಡಿ ಹಾಗೂ ನಾಮಫಲಕದ ಅನಾವರಣ ಸಮಾರಂಭ ಇಂದು ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಸುರೇಂದ್ರ ಕಾಂಬಳೆ ವಹಿಸಿದ್ದರು. ತಾಲೂಕು ಶಿಕ್ಷಣ ಸುಧಾರಣಾ ಸಮಿತಿಯ ಸದಸ್ಯರಾದ ಶ್ರೀ ಅನಿಕೇತ ಪ್ರದೀಪ ಪಟ್ಟಣ ನವೀಕೃತಗೊಂಡ ಕೊಠಡಿಯನ್ನು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆ ಬೆಳಗಾವಿಯ ಮಾನ್ಯ ಉಪನಿರ್ದೇಶಕರಾದ ಶ್ರೀಮತಿ ಲೀಲಾ ಹಿರೇಮಠ ನಾಮಫಲಕವನ್ನು ಅನಾವರಣಗೊಳಿಸಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳ ನಿರ್ವಹಣೆ ಹಾಗೂ ಖರ್ಚು-ವೆಚ್ಚಗಳನ್ನು ಭರಿಸಲು ಸರ್ಕಾರದಿಂದ ಪ್ರತ್ಯೇಕ ಅನುದಾನ ಮೀಸಲಾಗಿಲ್ಲ. ಈ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಿಗೆ ವಿಶೇಷ ಅನುದಾನ ಒದಗಿಸುವಂತೆ ಸರ್ಕಾರದ ಮಟ್ಟದಲ್ಲಿ ಅರ್ಜಿ ಸಲ್ಲಿಸುವ ಪ್ರಯತ್ನ ಮಾಡೋಣ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಎಲ್ಲಾ ಅಧಿಕಾರಿಗಳು ಸಿಬ್ಬಂದಿ ವರ್ಗ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಶ್ರೀ ಎಸ್. ಪಿ. ಕರಲಿಂಗಪ್ಪನವರ, ಶಿಕ್ಷಣ ಸಂಯೋಜಕರು (ಪ್ರೌಢ ವಿಭಾಗ), ಸ್ವಾಗತ ಕೋರಿದ್ದು, ಕಾರ್ಯಕ್ರಮವನ್ನು ನಿರೂಪಿಸಿದರು

Hot this week

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

Topics

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...
spot_img

Related Articles

Popular Categories

spot_img