Tuesday, December 9, 2025
14.8 C
Belagavi

ಆರ್ ಎಸ್ ಎಸ್ ನಿಷೇಧ, ರಾಜ್ಯದಲ್ಲಿ ಮತ್ತೆ ಎಮರ್ಜೆನ್ಸಿ ಬರುತ್ತಿದೆ ಎನಿಸುತ್ತಿದೆ: ಬಸವರಾಜ ಬೊಮ್ಮಾಯಿ

advertisement

spot_img

ಹಾವೇರಿ: ರಾಜ್ಯ ಸರ್ಕಾರದ ಬೇಜವಾಬ್ದಾರಿ ತನದಿಂದ ಪ್ರತಿಷ್ಠಿತ ಗೂಗಲ್ ಕಂಪನಿ ನಮ್ಮ ರಾಜ್ಯಬಿಟ್ಟು ಆಂಧ್ರಪ್ರದೇಶಕ್ಕೆ ಹೋಗುವಂತಾಗಿದೆ. ಸರ್ಕಾರ ಪ್ರಗತಿಪರವಾಗಿದ್ದರೆ ನಮ್ಮ ರಾಜ್ಯ ಬಿಟ್ಟು ಯೋಜನೆಗಳು ಹೋಗುವುದಿಲ್ಲ. ಈಗಿನ ಸರ್ಕಾರ ನೀವು ಹೋಗುವುದಿದ್ದರೆ ಹೋಗಿ ಅಂತ ಬೇಜವಾಬ್ದಾರಿ ತೋರುತ್ತಿರುವುದರಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿಷ್ಠಿತ ಸಂಸ್ಥೆ ಅಮೇರಿಕಾದ ಹೊರಗಡೆ 1.23 ಲಕ್ಷ ಕೋಟಿ ಬಂಡವಾಳ ಹೂಡುವ ಸಂಸ್ಥೆ ರಾಜ್ಯಕ್ಕೆ ಬರಬೇಕಿತ್ತು ಅದು ಬರದಿರುವುದು ದುರ್ದೈವದ ಸಂಗತಿ, ಕಾರಣ ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಎಲ್ಲದಕ್ಕೂ ದರ ಪಟ್ಟಿ ಸಿದ್ದವಾಗಿದೆ. ಮೂಲ ಸೌಕರ್ಯ ಕುಸಿದು ಬಿದ್ದಿದೆ. ಇಲ್ಲಿ ಸಾಮಾಜಿಕವಾಗಿ ಶಾಂತಿ ಸುವ್ಯವಸ್ಥೆ ಹದಗೆಟ್ಟಿದೆ. ಅಪರಾಧ ಪ್ರಕರಣ ಹೆಚ್ಚಾಗಿದೆ ಹೀಗಾಗಿ ಆಂಧ್ರದಲ್ಲಿ ಅಷ್ಡೊಂದು ಮಾನವ ಸಂಪನ್ಮೂಲ ಅವಕಾಶ ಇಲ್ಲದಿದ್ದರೂ ಆ ಸಂಸ್ಥೆ ಆಂದ್ರಪ್ರದೇಶದ ಕ್ಕೆ ಹೋಯಿತು. ನಾವಿದ್ದಾಗ ಪಾಸ್ಕಾನ್ ಕಂಪನಿ ಬಂದಾಗ ಆಂಧ್ರ ಪ್ರದೇಶ, ತಮಿಳುನಾಡು ತಮ್ಮ ರಾಜ್ಯಕ್ಕೆ ತೆಗೆದುಕೊಂಡು ಹೋಗಲು ಪ್ರಯತ್ನಿಸಿದ್ದರು. ನಾವು ಎಲ್ಲ ರೀತಿಯ ಸೌಕರ್ಯ ಕೊಟ್ಟು ಅದನ್ನು ಉಳಿಸಿಕೊಂಡಿದ್ದೇವು. ಅದು ಸುಮಾರು ಒಂದು ಲಕ್ಷ ಕೋಟಿ ಬಂಡವಾಳ ಹೂಡಿದೆ‌. ಈಗಾಗಲೇ 30 ಸಾವಿರ ಜನ ಉದ್ಯೋಗ ಪಡೆದಿದ್ದಾರೆ. ಸರ್ಕಾರ ಪ್ರಗತಿಪರವಾಗಿದ್ದರೆ ನಮ್ಮ ರಾಜ್ಯ ಬಿಟ್ಟು ಯೋಜನೆಗಳು ಹೋಗುವುದಿಲ್ಲ. ಈಗಿನ ಸರ್ಕಾರ ನೀವು ಹೋಗೊದಿದ್ದರೆ ಹೋಗಿ ಅಂತ ಬೇಜವಾಬ್ದಾರಿಯಿಂದ ಮಾತನಾಡುವುದು. ಸಿಎಂ ಹಾಗೂ ಸಚಿವರು ಇದರ ಬಗ್ಗೆ ತಲೆ ಕೆಡಸಿಕೊಳ್ಳದಿರುವುದು ದುರ್ದೈವ ಎಂದು ಬೇಸರ ವ್ಯಕ್ತಪಡಿಸಿದರು.

ವೈಫಲ್ಯ ಮುಚ್ಚಿಕೊಳ್ಳಲು ಸಂಘಕ್ಕೆ ಅಂಕುಶ
ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಸರ್ಕಾರ ನಿಷೇಧ ಹೇರಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆರ್ ಎಸ್ ಎಸ್ ನೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಎಲ್ಲ ನಗರ ಪ್ರದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಸ್ವಯಂ ಸೇವಕರು ಸೇರುತ್ತಿದ್ದಾರೆ. ಇದರಿಂದ ವಿಚಲಿತರಾಗಿದ್ದಾರೆ. ಕಾಂಗ್ರೆಸ್ ಯಾವಾಗಲೂ ಅಲ್ಪ ಸಂಖ್ಯಾತ ಆಧಾರಿತ ರಾಜಕಾರಣ ಮಾಡುತ್ತಿದೆ. ಅಲ್ಲಿ ಪಿಎಫ್ ಐ, ಎಸ್ ಡಿಪಿಐ ಇದೆ. ಅವರು ಕೂಡ ಈ ಥರದ ಚಟುವಟಿಕೆ ಮಾಡಿತ್ತಾರೆ. ಕಾನೂನು ವಿರುದ್ದ ಕೆಲಸ ಮಾಡುತ್ತಾರೆ. ಕೆಜೆ ಹಳ್ಳಿ ಡಿಜೆ ಹಳ್ಲಿಯಲ್ಲಿ ಪೊಲಿಸ್ ಸ್ಟೇಷನ್ ಮೇಲೆ ದಾಳಿ ಮಾಡಿದಾಗ ನಾವು ಹತೋಟಿಗೆ ತಂದು ಮುನ್ನೂರು ಜನರನ್ನು ಒಳಗೆ ಹಾಕಿದ್ದೇವು. ಆ ಎಲ್ಲ ಸಮಾಜ ಘಾತಕ ಶಕ್ತಿಗಳಿಗೆ ರಕ್ಷಣೆ ಕೊಡಲು ಸರ್ಕಾರ ಈ ಕೆಲಸ ಮಾಡುತ್ತಿದೆ ಅದನ್ನು ಮರೆ ಮಾಚಲು ಆರ್ ಎಸ್ ಎಸ್ ಮೇಲೆ ದಾಳಿ ಮಾಡುತ್ತಿದ್ದಾರೆ ಆರ್ ಎಸ್ ಎಸ್ ಯಾವಾಗಲೂ ಬಗ್ಗಿಲ್ಲ ಇದೆಲ್ಲ ನೋಡಿದರೆ ಮತ್ತೆ ಎಮರ್ಜೆನ್ಸಿ ಬರುತ್ತಿದೆ ಎನಿಸುತ್ತಿದೆ‌. ಸರ್ಕಾರಿ ಶಾಲೆಗಳ ಆಟದ ಮೈದಾನದಲ್ಲಿ ಮಕ್ಕಳು ಆಟವಾಡುತ್ತಾರೆ, ರಕ್ಷಣಾ ವೇದಿಕೆ ಕನ್ನಡ ಸಂಘಟನೆಗಳು ಕಾರ್ಯಕ್ರಮ ಮಾಡುತ್ತಾರೆ. ಅವರೆಲ್ಲ ಅನುಮತಿ ಪಡೆಯಬೇಕಾಗುತ್ತದೆ.

ಸಂಘದವರು ಶೇ 70% ರಷ್ಟು ಖಾಸಗಿ ಸ್ಥಳದಲ್ಲಿ ಶಾಖೆ ನಡೆಸುತ್ತಾರೆ. ಶೇ 30% ರಷ್ಟು ಮಾತ್ರ ಸರ್ಕಾರಿ ಜಾಗದಲ್ಲಿ ನಡೆಯುತ್ತದೆ. ಅದನ್ನು ತಡೆಯಲು ಈ ಸರ್ಕಾರ ಮುಂದಾಗಿದೆ. ಈ ಸರ್ಕಾರ ಬಂದ ಮೇಲೆ ಜಾತಿ ಜಾತಿ ನಡುವೆ ಗದ್ದಲ ಉಂಟುಮಾಡುತ್ತಿದೆ. ಗಣತಿ ಹೆಸರಲ್ಲಿ ಜಾತಿ ಮಾಡುತ್ತಿದೆ‌. ಸಮಾಜವಾದಿ ಎಂದು ಹೇಳುವ ಸಿದ್ದರಾಮಯ್ಯ ಜಾತಿಸ್ಟ್ ಸಿಎಂ ಆಗಿದ್ದಾರೆ. ಕರ್ನಾಟಕದ ಸಾಮರಸ್ಯದ ವಾತಾವರಣ ಹಾಳು ಮಾಡಿದ್ದಾರೆ.. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು, ಸಿಎಂ ಸ್ಥಾನ ಉಳಿಸಿಕೊಳ್ಳು ಈ ರೀತಿ ಮಾಡುತ್ತಿದ್ದಾರೆ. ಇವತ್ತೆ ಚುನಾವಣೆ ನಡೆದರೆ ಕಾಂಗ್ರೆಸ್ 25 ಸ್ಥಾನ ಗೆಲ್ಲುವುದು ಕಷ್ಟ ಎಂದು ವಾಗ್ದಾಳಿ ನಡೆಸಿದರು‌.
ರೇಷನ್ ಕಾರ್ಡ್ ರದ್ದು ಮಾಡುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರದ ಬಳಿ ದುಡ್ಡಿಲ್ಲ ಅನ್ನುವ ಬದಲು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಕಡಿಮೆ ಮಾಡಿ ತಮ್ಮ ಹಣಕಾಸಿನ ದುಸ್ಥಿತಿ ಮುಚ್ಚಿಕೊಳ್ಳಲು ಈ ಕೆಲಸ ಮಾಡುತ್ತಿದ್ದಾರೆ‌ ಎಂದು ಹೇಳಿದರು.

Hot this week

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು.ನಾಡಿನ ರೈತರ ಸಮಸ್ಯೆಗಳು,...

ಸಿ ಟಿ ರವಿ|ಮೆಕ್ಕೆಜೋಳ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ

ರೈತರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಹೋರಾಟ ಮಾಡಿದ್ದೇವೆ ಈ ಅಧಿವೇಶನದಲ್ಲಿ...

ಸಚಿವ ಸಂತೋಷ್ ಲಾಡ್ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ

ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ...

ಆರೋಗ್ಯ ಸಚಿವ ದಿನೇಶ್ ಗುಂಡುರಾವ್

ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಹೇಳಿಕೆ ಸಮಸ್ಯೆಗಳು ಯಾವಾಗಲು...

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್   https://youtu.be/Yy8EZZFHGjs

Topics

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು.ನಾಡಿನ ರೈತರ ಸಮಸ್ಯೆಗಳು,...

ಸಿ ಟಿ ರವಿ|ಮೆಕ್ಕೆಜೋಳ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ

ರೈತರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಹೋರಾಟ ಮಾಡಿದ್ದೇವೆ ಈ ಅಧಿವೇಶನದಲ್ಲಿ...

ಸಚಿವ ಸಂತೋಷ್ ಲಾಡ್ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ

ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ...

ಆರೋಗ್ಯ ಸಚಿವ ದಿನೇಶ್ ಗುಂಡುರಾವ್

ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಹೇಳಿಕೆ ಸಮಸ್ಯೆಗಳು ಯಾವಾಗಲು...

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್   https://youtu.be/Yy8EZZFHGjs

ಸದನದಲ್ಲಿ ಸರ್ಕಾರಕ್ಕೆ ಎದುರಾಗುವ ಪ್ರಮುಖ ವಿಚಾರಗಳು

ಇಂದಿನಿಂದ ಕುಂದಾನಗರಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ ಒಟ್ಟು 10 ದಿನಗಳ ಕಾಲ ನಡೆಯಲಿರುವ...

ಕೆಂಗಲ್ ಹನುಮಂತಯ್ಯ ಪುಣ್ಯ ತಿಥಿ ಸರ್ಕಾರ ಪ್ರತಿ ಆಚರಣೆ ಮಾಡುತ್ತದೆ|ಸಿಎಂ ಸಿದ್ದರಾಮಯ್ಯ

ಕೆಂಗಲ್ ಹನುಮಂತಯ್ಯ ಪುಣ್ಯ ತಿಥಿ ಸರ್ಕಾರ ಪ್ರತಿ ಆಚರಣೆ ಮಾಡುತ್ತದೆ ಹನುಮಂತಯ್ಯ ಒಬ್ಬ ದಕ್ಷ...

ಪಂಚಭೂತಗಳಲ್ಲಿ ಲೀನವಾದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ.

ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು. ಒಂದೇ ಕಡೆ ನಾಲ್ಕು ಜನರ...
spot_img

Related Articles

Popular Categories

spot_img