Wednesday, August 12, 2026
20.7 C
Belagavi

ಬ್ರಿಡ್ಜ್ ಟು ಬೆಂಗಳೂರು -2026 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಮಾಡಿದ ಭಾಷಣದ ಸಾರಾಂಶ

advertisement

spot_img

ಬ್ರಿಡ್ಜ್ ಟು ಬೆಂಗಳೂರು -2026 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಮಾಡಿದ ಭಾಷಣದ ಸಾರಾಂಶ

ನವದೆಹಲಿ,

ಬ್ರಿಡ್ಜ್ ಟು ಬೆಂಗಳೂರು- ಕಾರ್ಯಕ್ರಮ ರಾಜತಾಂತ್ರಿಕ ಮಾತುಕತೆಗಿಂತಲೂ ಭಿನ್ನವಾಗಿದ್ದು, ಆಲೋಚನೆ, ಆರ್ಥಿಕತೆಗಳು ಮತ್ತು ಜನರನ್ನು ಒಂದುಗೂಡಿಸುವ ವೇದಿಕೆಯಾಗಿದೆ. ಜಿಐಎ( Global Innovation Alliance) ಮೂಲಕ ಜಾಗತಿಕ ಪಾಲುದಾರಿಕೆಗಳನ್ನು ಬಲಪಡಿಸುವ ಕರ್ನಾಟಕದ ಬದ್ಧತೆಯ ಸಂಕೇತವಾಗಿದೆಯಲ್ಲದೆ ಮುಂದಿನ ನವೆಂಬರ್ ತಿಂಗಳಲ್ಲಿ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿಟ್ 2026 ರ ಮುನ್ನುಡಿಯೂ ಹೌದು.

ಈ ಕಾರ್ಯಕ್ರಮದ ಮೂಲಕ ನಾವೀನ್ಯತೆ, ಸಂಶೋಧನೆ, ಶಿಕ್ಷಣ, ಕೌಶಲ್ಯ, ಸ್ಟಾಟ್ಟ್ ಅಪ್ ಮತ್ತು ಹೂಡಿಕೆಗಳಲ್ಲಿ ದೀರ್ಘಕಾಲಿಕ ಸಹಯೋಗವನ್ನು ರಾಜ್ಯ ಬಯಸುತ್ತದೆ. ವಿಶ್ವವೇ ಒಂದು ಸಂಪರ್ಕ ಜಾಲವಾಗಿರುವ ಈ ಹೊತ್ತಿನಲ್ಲಿ ಇಂಥ ಪಾಲುದಾರಿಕೆಗಳು ಜಾಗತಿಕ ಸವಾಲುಗಳನ್ನು ಪರಿಹರಿಸಲು ಮತ್ತು ಒಟ್ಟಾಗಿ ಬೆಳೆಯಲು ಹೊಸ ಅವಕಾಶಗಳನ್ನು ದೊರಕಿಸಲು ಅಗತ್ಯವೂ ಆಗಿದೆ.ಭಾರತದ ಸಿಲಿಕಾನ್ ವ್ಯಾಲಿ ಎಂದೇ ಜಾಗತಿಕವಾಗಿ ಗುರುತಿಸಲ್ಪಟ್ಟಿರುವ ಬೆಂಗಳೂರು ಸಮಗ್ರ ನಾವೀನ್ಯತಾ ಪರಿಸರ ವ್ಯವಸ್ಥೆಯಾಗಿ ವಿಕಸನಗೊಂಡಿದೆ. ರಾಜ್ಯವು 16,000 ಸ್ಟಾಟ್ಟ್ ಅಪ್ ಗಳಿಗೆ ನೆಲೆಯಾಗಿದ್ದು, ಭಾರತದ ಸ್ಟಾರ್ಟ್ ಅಪ್ ಕೇಂದ್ರವಾಗಿದೆ. ಭಾರತದ ಜಾಗತಿಕ ಸಾಮರ್ಥ್ಯ ಕೇಂದ್ರಗಳಲ್ಲಿ ಸುಮಾರು ಮೂರನೇ ಒಂದು ಭಾಗ, ಅಂದರೆ 550 ಕ್ಕೂ ಹೆಚ್ಚು GCC ಗಳನ್ನು ಹೊಂದಿದೆ. ಅತ್ಯಾಧುನಿಕ ನಾವೀನ್ಯತೆ ಮತ್ತು ಪ್ರತಿಭೆಯನ್ನು ಪೋಷಿಸುವ ಪ್ರಮುಖ ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳ ಬೃಹತ್ ಜಾಲವನ್ನೇ ಬೆಂಗಳೂರು ಹೊಂದಿದೆ.

ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನದಿಂದ ಹಿಡಿದು ಅಂತರಿಕ್ಷಯಾನ, ಅರೆವಾಹಕಗಳು, ಬಾಹ್ಯಾಕಾಶ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ಮತ್ತು ಕ್ವಾಂಟಮ್ ಸಂಶೋಧನೆಯವರೆಗೆ ಕರ್ನಾಟಕವು ತಾಂತ್ರಿಕ ಪರಿವರ್ತನೆಯಲ್ಲಿ ನಿರಂತರವಾಗಿ ಮುಂಚೂಣಿಯಲ್ಲಿದೆ. ನಮ್ಮ ರಾಜ್ಯದಲ್ಲಿ ನಾವೀನ್ಯತೆ ಕೇವಲ ಆರ್ಥಿಕ ಚಟುವಟಿಕೆಯಲ್ಲ, ಅದು ಒಂದು ಜೀವನ ವಿಧಾನವಾಗಿದೆ.

ಕೌಶಲ್ಯಯುತ ಯುವಜನ, ವಿಶ್ವ ದರ್ಜೆಯ ಸಂಶೋಧನೆ ಮತ್ತು ಶೈಕ್ಷಣಿಕ ಸಂಸ್ಥೆಗಳು, ಬಲಿಷ್ಠ ಡಿಜಿಟಲ್ ಮತ್ತು ಭೌತಿಕ ಮೂಲಸೌಕರ್ಯ, ತಡೆರಹಿತ ಜಾಗತಿಕ ಸಂಪರ್ಕ ಮತ್ತು ಎಲ್ಲರನ್ನೂ ಒಳಗೊಂಡ ಸಾಮಾಜಿಕ ವಾತಾವರಣ ನಮ್ಮ ಸಾಮರ್ಥ್ಯ.

ಮಾನವೀಯ ತಂತ್ರಜ್ಞಾನವನ್ನು ಹೊಂದುವುದು ಕರ್ನಾಟಕ ಸರ್ಕಾರದ ಭವಿಷ್ಯದ ಕಲ್ಪನೆಯಾಗಿದೆ. ನಮ್ಮ ಅಭಿವೃದ್ಧಿ ಮಾದರಿಯು ಸಾಮಾಜಿಕ ನ್ಯಾಯ, ಒಳಗೊಳ್ಳುವಿಕೆ ಮತ್ತು ಸುಸ್ಥಿರತೆಯ ತತ್ವಗಳನ್ನು ಹಾಗೂ ತ್ವರಿತ ಆರ್ಥಿಕ ಬೆಳವಣಿಗೆಯ ಮಧ್ಯೆ ಸಮತೋಲನವನ್ನು ಕಾಯ್ದುಕೊಳ್ಳಲಿದೆ.

ಈ ದೃಷ್ಟಿಯನ್ನು ಆಧರಿಸಿ ನಾವು ಐಟಿ, ಸ್ಟಾರ್ಟ್‌ಅಪ್‌ಗಳು, ಜೈವಿಕ ತಂತ್ರಜ್ಞಾನ, ಬಾಹ್ಯಾಕಾಶ ತಂತ್ರಜ್ಞಾನ ಮತ್ತು ಕೌಶಲ್ಯದಲ್ಲಿ ಭವಿಷ್ಯತ್ ಕಾಲದ ನೀತಿಗಳನ್ನು ಜಾರಿಗೆ ತರುತ್ತಿದ್ದೇವೆ, ಭವಿಷ್ಯಕ್ಕೆ ಸಿದ್ಧವಾಗಿರುವ ಕಾರ್ಯಪಡೆಯನ್ನು ರಚಿಸಲು ಪ್ರತಿಭಾ ಅಭಿವೃದ್ಧಿಯಲ್ಲಿ ಹೂಡಿಕೆ ಮಾಡುತ್ತಿದ್ದೇವೆ ಮತ್ತು ಆರೋಗ್ಯ ರಕ್ಷಣೆ, ಶಿಕ್ಷಣ, ಕೃಷಿ ಮತ್ತು ಪರಿಸರ ಸುಸ್ಥಿರತೆಯಲ್ಲಿ ಸಾಮಾಜಿಕ ಸವಾಲುಗಳನ್ನು ಎದುರಿಸುವ ನಾವೀನ್ಯತೆಯನ್ನು ಉತ್ತೇಜಿಸುತ್ತಿದ್ದೇವೆ.

2032 ರ ವೇಳೆಗೆ ಕರ್ನಾಟಕವನ್ನು ಪ್ರತಿಭೆ, ತಂತ್ರಜ್ಞಾನ ಮತ್ತು ಸದೃಢತೆಯುಳ್ಳ USD 1 ಟ್ರಿಲಿಯನ್ ಆರ್ಥಿಕತೆಯಾಗಿ ಪರಿವರ್ತಿಸುವುದು ನಮ್ಮ ಆಕಾಂಕ್ಷೆಯಾಗಿದೆ. ಜಿಐಎ ಮೂಲಕ ಕರ್ನಾಟಕವು -ಸರ್ಕಾರಗಳು, ಶೈಕ್ಷಣಿಕ ಸಂಸ್ಥೆಗಳು , ಉದ್ಯಮದ ನಾಯಕರು ಮತ್ತು ವಿಶ್ವದ ಸ್ಟಾರ್ಟ್ ಅಪ್ ಗಳ ಜೊತೆಗೆ ದೀರ್ಘಕಾಲಿಕ ಪಾಲುದಾರಿಕೆ ಮಾಡಿಕೊಳ್ಳುವ ಗುರಿಹೊಂದಿದೆ. ಇಂಥ ಸಹಯೋಗಗಳು ಜಂಟಿ ಸಂಶೋಧನೆ ಮತ್ತು ಅಭಿವೃದ್ಧಿ, ಪ್ರತಿಭಾ ವಿನಿಮಯ ಮತ್ತು ಕೌಶಲ್ಯದ ಚಲನೆ, ಸ್ಟಾರ್ಟ್ ಅಪ್ ಮಾರುಕಟ್ಟೆಯ ಪ್ರವೇಶ, ನೂತನ ತಂತ್ರಜ್ಞಾನಗಳಲ್ಲಿ ಸಹಯೋಗ ಮತ್ತು ಸುಸ್ಥಿರ ಪರಿಸರ ಸಂಬಂಧಿ ಪರಿಹಾರಗಳನ್ನು ಕಂಡುಕೊಳ್ಳಲು ಇಚ್ಚಿಸಿದೆ .

ಬ್ರಿಡ್ಜ್ ಟು ಬೆಂಗಳೂರು- ಕಾರ್ಯಕ್ರಮದ ಮೂಲಕ ಕರ್ನಾಟಕದೊಂದಿಗೆ ಪಾಲುದಾರಿಕೆ, ನಾವೀನ್ಯತೆ ಮತ್ತು ಹೂಡಿಕೆ ಮಾಡಲು ಜಗತ್ತಿಗೆ ಆಹ್ವಾನ ನೀಡುತ್ತೇನೆ.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img