Monday, August 10, 2026
21.2 C
Belagavi

ಬ್ಯಾರಿ ಸಮುದಾಯ ತಮ್ಮ ಅಸ್ಮಿತೆಯನ್ನು, ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕು: ಸಿಎಂ ಸಿದ್ದರಾಮಯ್ಯ

advertisement

spot_img

ಬ್ಯಾರಿ ಸಮುದಾಯ ಜಾತ್ಯತೀತ ಸಮುದಾಯ

ಬ್ಯಾರಿ ಸಮುದಾಯ ತಮ್ಮ ಅಸ್ಮಿತೆಯನ್ನು, ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು :
ಬ್ಯಾರಿಗಳನ್ನು ಯಾರೇ ವಿಭಜಿಸಲು ಪ್ರಯತ್ನಿಸಿದರೂ ತಮ್ಮ ಅಸ್ಮಿತೆಯನ್ನು, ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಇವರ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಬ್ಯಾರಿ ಕೂಟ -2026 ಉದ್ಘಾಟಿಸಿ ಮಾತನಾಡಿದರು.

ತುಳು ಮತ್ತು ಬ್ಯಾರಿ ಭಾಷೆಗೆ ಲಿಪಿ ಇಲ್ಲದ್ದರಿಂದ ಕನ್ನಡದಲ್ಲಿಯೇ ನಿಮ್ಮತನವನ್ನು ಉಳಿಸಿಕೊಂಡಿರುವುದು ಮುಖ್ಯ ಎಂದರು.

ಬ್ಯಾರಿಗಳು ಜಾತ್ಯತೀತರು

ದಕ್ಷಿಣ ಕನ್ನಡ ಜಿಲ್ಲೆಯ ಬ್ಯಾರಿಗಳು ದೇಶ, ವಿದೇಶ ಅನೇಕ ಭಾಗಗಳಲ್ಲಿ ಕೆಲಸ ಮಾಡುವವರಾದರೂ ಬ್ಯಾರಿ ಅಸ್ಮಿತೆಯನ್ನು ಬಿಟ್ಟುಕೊಟ್ಟಿಲ್ಲ. ಬ್ಯಾರಿಗಳು ಜಾತ್ಯತೀತರು. ಜಾತಿ ವ್ಯಾಮೋಹವಾಗಲಿ, ಧರ್ಮದ ವ್ಯಾಮೋಹವಾಗಲಿ ಇಲ್ಲ. ಮೂಲತಃ ವ್ಯಾಪಾರಿಗಳಾದ ಬ್ಯಾರಿಗಳು ಎಲ್ಲಾ ಸಮುದಾಯಗಳೊಂದಿಗೆ ಹೊಂದಿಕೊಂಡು ಅವರ ಸಂಸ್ಕೃತಿ, ಉದ್ಯೋಗದೊಂದಿಗೆ ತಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳುತ್ತಿರುವುದು ದೊಡ್ಡ ವಿಚಾರ ಎಂದು ಹೇಳಿದರು .ಲಿಂಗ ತಾರತಮ್ಯ ಹೋಗಲಾಡಿಸಲು ವಿದ್ಯಾಭ್ಯಾಸ ಅವಶ್ಯಕ

ಬ್ಯಾರಿ ಸಮುದಾಯದವರು ತಮ್ಮ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಸ್ವಾಗತಾರ್ಹ. ಒಂದು ಕಾಲದಲ್ಲಿ ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಹೆಣ್ಣು ಮಕ್ಕಳು ವಿದ್ಯಾವಂತರಾಗುವುದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿರುವುದು ಒಳ್ಳೆಯ ಬೆಳವಣಿಗೆ. ಲಿಂಗ ತಾರತಮ್ಯ ಹೋಗಲಾಡಿಸಲು ವಿದ್ಯಾಭ್ಯಾಸ ಅವಶ್ಯಕ ಎಂದರು.

ಧರ್ಮವನ್ನು ಅನುಕೂಲಕ್ಕೆ ತಕ್ಕಂತೆ ವ್ಯಾಖ್ಯಾನಿಸುವುದು ಸರಿಯಲ್ಲ

ಎಲ್ಲರೂ ಜಾತ್ಯತೀತರಾಗಿರುವುದು ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಪರಸ್ಪರ ಪ್ರೀತಿಸಬೇಕು , ಮನುಷ್ಯರಾಗಿ ಬಾಳಬೇಕು ಎಂದು ಎಲ್ಲಾ ಧರ್ಮಗಳೂ ಹೇಳುತ್ತವೆ. ಧರ್ಮವನ್ನು ಅನುಕೂಲಕ್ಕೆ ತಕ್ಕಂತೆ ವ್ಯಾಖ್ಯಾನಿಸುವುದು ಸರಿಯಲ್ಲ ಎಂದರು.

*ಬ್ಯಾರಿ ಭಾಷೆ, ಕಲೆ ಉಳಿಸಲು ಸರ್ಕಾರ ನೆರವು ನೀಡಲಿದೆ:
ಸಿಎಂ ಭರವಸೆ*

ಬ್ಯಾರಿ ಭವನ ನಿರ್ಮಾಣಕ್ಕೆ 5 ಕೋಟಿ ರೂ ನೀಡಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಬ್ಯಾರಿ ಭಾಷೆ, ಕಲೆ ಉಳಿಸಲು ಸರ್ಕಾರ ನೆರವು ನೀಡಲಿದೆ. ಮಂಗಳೂರು ಬ್ಯಾರಿ ಅಕಾಡೆಮಿಗೆ 3 ಕೋಟಿ, ಹಜ್ ಭವನಕ್ಕೆ 10 ಕೋಟಿ ಅನುದಾನ ನೀಡಲಾಗಿದೆ ಎಂದರು.

ಬ್ಯಾರಿ ಸಮುದಾಯಕ್ಕೆ ಸೇರಿದ ಯು. ಟಿ.ಖಾದರ್ ವಿಧಾನಸಭಾಧ್ಯಕ್ಷರಾಗಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img