ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಕಿಸಾನ್ ಸಭಾ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ‘ಕಿಸಾನ್ ಸಭಾ ಸಭಾಂಗಣ’ವನ್ನು ಉದ್ಘಾಟಿಸಿದ ಬಳಿಕ ಮಹಾತ್ಮಗಾಂಧಿ ವಸತಿ ಪ್ರೌಢ ಶಾಲಾ ಆವರಣದಲ್ಲಿ ನಡೆದ ವೇದಿಕೆ ಸಮಾರಂಭದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಪಾಲ್ಗೊಳ್ಳಲಾಯಿತು.
ಸನ್ಮಾನ್ಯ ವೀರಪ್ಪ ಮೊಯ್ಲಿಜಿ ಅವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಕಿಸಾನ್ ಸಭಾ ಟ್ರಸ್ಟ್ ಸಾಮಾಜಿಕ ಕಾರ್ಯವನ್ನು ನಿರಂತರವಾಗಿ ಮಾಡುತ್ತಿರುವುದು ಶ್ಲಾಘನೀಯ.
1968 – 69ನೇ ಸಾಲಿನಲ್ಲಿ ರೈತರು ತೀರಾ ಸಂಕಷ್ಟದಲ್ಲಿದ್ದಾಗ ಅವರ ಬೆನ್ನಿಗೆ ನಿಲ್ಲುವ ಉದ್ದೇಶದಿಂದ ಮಾನ್ಯ ವೀರಪ್ಪ ಮೊಯ್ಲಿಯವರು ದೂರದೃಷ್ಟಿ ಮತ್ತು ಬಡವರ ಬಗೆಗಿನ ಕಾಳಜಿಯಿಂದ ಈ ಕಿಸಾನ್ ಸಭಾ ಟ್ರಸ್ಟ್ ಸ್ಥಾಪಿಸಿದರು.
ರೈತರ ಸಮಸ್ಯೆಗಳಿಗೆ ಧ್ವನಿಯಾಗುವುದು, ಶಿಕ್ಷಣ -ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು, ಗ್ರಾಮೀಣ ಅಭಿವೃದ್ಧಿಗೆ ಕೈಜೋಡಿಸುತ್ತಿದೆ. ಜೊತೆಗೆ 1992ರಲ್ಲಿ ಪ್ರೌಢ ಶಾಲೆಯನ್ನು ಆರಂಭಿಸಿ, ಸಮಾಜದ ಬಡ ವರ್ಗದವರಿಗೆ ಉಚಿತವಾಗಿ ಶಿಕ್ಷಣ ನೀಡುವ ಕೆಲಸ ಮಾಡುತ್ತಿರುವುದು ಇಡೀ ದೇಶಕ್ಕೆ ಮಾದರಿಯಾದ ಕಾರ್ಯವಾಗಿದೆ.
ಈ ವೇಳೆ ಮಾಜಿ ಮುಖ್ಯಮಂತ್ರಿಗಳಾದ ಎಂ.ವೀರಪ್ಪ ಮೊಯ್ಲಿ, ಸಚಿವರಾದ ಎಚ್.ಸಿ.ಮಹದೇವಪ್ಪ, ಮಧು ಬಂಗಾರಪ್ಪ, ಶಾಸಕರಾದ ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜ, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ರಾಜೇಂದ್ರ ಕುಮಾರ್, ಮಾಜಿ ಸಚಿವರಾದ ರಮಾನಾಥ್ ರೈ, ವಿನಯ್ ಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕ ಗೋಪಾಲ್ ಪೂಜಾರಿ, ಮುಖಂಡರಾದ ಮಂಜುನಾಥ್ ಪೂಜಾರಿ, ಎಂ.ಎ.ಗಫೂರ್, ಅಶೋಕ್ ಕುಮಾರ್ ಕೊಡವೂರು, ಕಿಸಾನ್ ಸಭಾದ ಅಧ್ಯಕ್ಷರಾದ ಹರ್ಷ ಮೊಯ್ಲಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.




