Sunday, August 9, 2026
20.6 C
Belagavi

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

advertisement

spot_img

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

​ಸರ್ಕಾರದ ನಡವಳಿಕೆ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಧಕ್ಕೆ: ಬಸವರಾಜ ಬೊಮ್ಮಾಯಿ

​ಬೆಂಗಳೂರು: ದೇಶದಲ್ಲೇ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ನಡೆದುಕೊಂಡಿರುವ ರೀತಿ ಯಾವುದೇ ಸತ್ಸಂಪ್ರದಾಯಕ್ಕೆ ಅನುಗುಣವಾಗಿಲ್ಲ. ಇದು ಸಭಾಪತಿ ಸ್ಥಾನದ ಗೌರವಕ್ಕೆ ಹಾಗೂ ಸಂವಿಧಾನಕ್ಕೆ ಎಸಗಿದ ಅಪಮಾನವಾಗಿದೆ. ಕರ್ನಾಟಕ ವಿಧಾನ ಪರಿಷತ್ತಿನ ಇತಿಹಾಸದಲ್ಲಿ ಇದೊಂದು ಕೆಟ್ಟ ನಡವಳಿಕೆ ಹಾಗೂ ಕಪ್ಪು ಚುಕ್ಕೆಯಾಗಿ ಉಳಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಸವರಾಜ ಹೊರಟ್ಟಿಯವರು ​ಸುದೀರ್ಘ 46 ವರ್ಷಗಳ ಕಾಲ ಯಾವುದೇ ಬಿಡುವಿಲ್ಲದೆ ವಿಧಾನ ಪರಿಷತ್ ಸದಸ್ಯರಾಗಿ, ಸಚಿವರಾಗಿ ಹಾಗೂ ಸಭಾಪತಿಯಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ. ಅವರು ಪಕ್ಷಾತೀತವಾಗಿ ವಿಷಯಾಧಾರಿತ ರಾಜಕಾರಣಕ್ಕೆ ಹೆಸರುವಾಸಿಯಾದವರು. ಆದರೆ, ಅವರನ್ನು ಮುಖ್ಯಮಂತ್ರಿಗಳ ಮನೆಗೆ ಕರೆಯಿಸಿ ಮಾತನಾಡಿ, ವಿಧಾನಸೌಧದಲ್ಲಿಯೇ ಕುಳಿತು ಒತ್ತಾಯಪೂರ್ವಕವಾಗಿ ರಾಜೀನಾಮೆ ಪಡೆದಿರುವುದು ಮತ್ತು ರಾಜೀನಾಮೆ ನೀಡಿದ ಕೇವಲ 5 ನಿಮಿಷಗಳಲ್ಲಿ ಅದನ್ನು ಅಂಗೀಕರಿಸಿ ಪ್ರಕಟಣೆ ಹೊರಡಿಸಿರುವುದು ಸರ್ಕಾರದ ದುರಾಲೋಚನೆಯನ್ನು ಪ್ರದರ್ಶಿಸುತ್ತದೆ. ​ಈ ಪ್ರಕ್ರಿಯೆಯು ಯಾವುದೇ ಸತ್ಸಂಪ್ರದಾಯಕ್ಕೆ ಅನುಗುಣವಾಗಿಲ್ಲ. ಇದು ಸಭಾಪತಿ ಸ್ಥಾನದ ಗೌರವಕ್ಕೆ ಹಾಗೂ ಸಂವಿಧಾನಕ್ಕೆ ಎಸಗಿದ ಅಪಮಾನವಾಗಿದೆ. ಕರ್ನಾಟಕ ವಿಧಾನ ಪರಿಷತ್ತಿನ ಇತಿಹಾಸದಲ್ಲಿ ಇದೊಂದು ಕೆಟ್ಟ ನಡವಳಿಕೆ ಹಾಗೂ ಕಪ್ಪು ಚುಕ್ಕೆಯಾಗಿ ಉಳಿಯಲಿದೆ ಎಂದು ತಿಳಿಸಿದ್ದಾರೆ.
​ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವರು ನೀಡಿದ ಕೊಡುಗೆ ಮತ್ತು ಮಾಡಿದ ಕೆಲಸಗಳು ಇತಿಹಾಸದಲ್ಲಿ ಶಾಶ್ವತವಾಗಿರಲಿವೆ. ರಾಜೀನಾಮೆಯ ನಂತರವೂ ಅವರು ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿ ಮುಂದುವರಿಯಬೇಕು. ಯುವಕರಿಗೆ ಹಾಗೂ ಹೊಸ ರಾಜಕಾರಣಿಗಳಿಗೆ ತಮ್ಮ ಸುದೀರ್ಘ ಅನುಭವದ ಮೂಲಕ ಮಾರ್ಗದರ್ಶನ ನೀಡಬೇಕು ಎಂಬುದು ಸಾರ್ವಜನಿಕರ ಅಪೇಕ್ಷೆಯಾಗಿದೆ. ಅವರ ಹಿರಿತನ ಮತ್ತು ಅಪಾರ ಅನುಭವಕ್ಕೆ ರಾಜ್ಯದ ಜನತೆ ಸದಾ ಗೌರವಪೂರ್ವಕವಾಗಿ ಋಣಿಯಾಗಿರುತ್ತದೆ ಎಂದು ತಿಳಿಸಿದ್ದಾರೆ.

Hot this week

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...

ಸರ್ಕಾರಿ ಅನುದಾನವಿಲ್ಲದೆ ಸ್ಮಾರ್ಟ್ ಬೋರ್ಡ್ ಅಳವಡಿಕೆ: ಮುದುಕವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಡಿಜಿಟಲ್ ಬೋರ್ಡ್ ಉದ್ಘಾಟನೆ ಹಾಗೂ ಅಭಿನಂದನಾ ಸಮಾರಂಭ

ಸರ್ಕಾರಿ ಅನುದಾನವಿಲ್ಲದೆ ಸ್ಮಾರ್ಟ್ ಬೋರ್ಡ್ ಅಳವಡಿಕೆ: ಮುದುಕವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಡಿಜಿಟಲ್...

ನವಲಗುಂದದಲ್ಲಿ ಬೆಳೆ ಹಾನಿ ಪರಿಶೀಲನೆ: ರೈತರ ಸಮಸ್ಯೆ ಸರ್ಕಾರದ ಗಮನಕ್ಕೆ- ಸಂತೋಷ ಲಾಡ್

ನವಲಗುಂದದಲ್ಲಿ ಬೆಳೆ ಹಾನಿ ಪರಿಶೀಲನೆ: ರೈತರ ಸಮಸ್ಯೆ ಸರ್ಕಾರದ ಗಮನಕ್ಕೆ- ಸಂತೋಷ...

Topics

ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ವತಿಯಿಂದ ಶೇರುದಾರರಿಗೆ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಣೆ.

ಇಂದು ಖಾನಾಪೇಠದ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ ವತಿಯಿಂದ ಕಾರ್ಖಾನೆಯ...

ಇವರಿಗೆ ಹೇಳೋರಿಲ್ಲ, ಕೇಳೋರಿಲ್ಲ, ಖಂಡ್ರೆ ಸಾಹೇಬ್ರೇ ನೀವಾದ್ರೂ ಅಥಣಿ ಈ ಅಧಿಕಾರಿಗಳ ಅಂಧಾ ದರ್ಬಾರ್ ಗೆ ಮುಕ್ತಿ ನೀಡಿ..!

ಇವರಿಗೆ ಹೇಳೋರಿಲ್ಲ, ಕೇಳೋರಿಲ್ಲ, ಖಂಡ್ರೆ ಸಾಹೇಬ್ರೇ ನೀವಾದ್ರೂ ಅಥಣಿ ಈ ಅಧಿಕಾರಿಗಳ...

ಜವಾಬ್ದಾರಿ ವಹಿಸಿರುವ ಜಿಲ್ಲೆಗಳಿಗೆ ತೆರಳಿ ಅತಿವೃಷ್ಟಿ, ಅನಾವೃಷ್ಟಿ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ

ಜವಾಬ್ದಾರಿ ವಹಿಸಿರುವ ಜಿಲ್ಲೆಗಳಿಗೆ ತೆರಳಿ ಅತಿವೃಷ್ಟಿ, ಅನಾವೃಷ್ಟಿ ಪರಿಶೀಲಿಸಿ ವರದಿ ನೀಡಲು...
spot_img

Related Articles

Popular Categories

spot_img