Wednesday, August 12, 2026
20.7 C
Belagavi

ನುಡಿದಂತೆ ನಡೆದ ಸಂತಸ: ದಿನೇಶ್ ಗುಂಡೂರಾವ್

advertisement

spot_img

ನುಡಿದಂತೆ ನಡೆದ ಸಂತಸ: ದಿನೇಶ್ ಗುಂಡೂರಾವ್

ಸಾರ್ವಜನಿಕರ ದಶಕಗಳ ಬೇಡಿಕೆಯಾಗಿದ್ದ ಶ್ರೀರಾಮಪುರ, ಸ್ವತಂತ್ರ ಪಾಳ್ಯ ಕಡೆಯಿಂದ ಮಂತ್ರಿ ಮಾಲ್ ಮೆಟ್ರೋ ನಿಲ್ದಾಣದವರೆಗಿನ ಪಾದಾಚಾರಿ ಸುರಂಗ ಮಾರ್ಗ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ದಿನೇಶ್ ಗುಂಡೂರಾವ್

ಇದು ಈ ಭಾಗದ ಪ್ರಮುಖ ಬೇಡಿಕೆ ಯಾಗಿತ್ತು. ಹಿಂದಿನ ಚುನಾವಣೆ ಸಂದರ್ಭದಲ್ಲಿ ಇದನ್ನು ಮಾಡಿಯೇ ಮಾಡುತ್ತೇನೆ ಎಂದು ಆಶ್ವಾಸನೆ ಕೊಟ್ಟಿದ್ದೆ. ಅದರಂತೆಯೇ ಈಗ ಕಾಮಗಾರಿಗೆ ಭೂಮಿ ಪೂಜೆ ನಡೆಸುತ್ತಿರುವುದು ಅತ್ಯಂತ ಸಂತೋಷ ತಂದಿದೆ. ಮಾತು ಉಳಿಸಿಕೊಂಡ ಸಂತೃಪ್ತಿ ಇದೆ.ಹಲವಾರು ಬಾರಿ ಪ್ರಯತ್ನ ಪಟ್ಟಾಗಲು ಕೆಲವು ತಾಂತ್ರಿಕ ಸಮಸ್ಯೆಗಳಿಂದ ಇದು ಕಾರ್ಯಗತವಾಗಿರಲಿಲ್ಲ. ಜನರ ಸುರಕ್ಷತೆ ಮತ್ತು ಅನುಕೂಲ ದೃಷ್ಟಿಯಿಂದ ಈ ಸುರಂಗ ಮಾರ್ಗ ಅತ್ಯಂತ ಮಹತ್ವದ್ದಾಗಿತ್ತು. ಈಗಾಗಲೇ ಓಕಳಿಪುರಂನಲ್ಲಿ ಅಂಡರಪಾಸ್ ಮಾಡಿದ್ದೇವೆ. ಜನರಿಗೆ ಬಹಳ ಅನುಕೂಲವಾಗುತ್ತಿದೆ. ಇದನ್ನು ಮಾಡಲೇಬೇಕು ಅಂತ ಸೋಮಣ್ಣ ಅವರಲ್ಲಿ ಮೂರ್ನಾಲ್ಕು ಬಾರಿ ವಿನಂತಿ ಮಾಡಿದ್ದೆ. ಈಗ ಸಮಯ ಒದಗಿ ಬಂದಿದೆ. ₹5.5 ಕೋಟಿ ವೆಚ್ಚದಲ್ಲಿ ಈ ಸುರಂಗಮಾರ್ಗ ಆರು ತಿಂಗಳ ಒಳಗಾಗಿ ಪೂರ್ಣಗೊಂಡು ಸಾರ್ವಜನಿಕರ ಉಪಯೋಗಕ್ಕೆ ಸಿದ್ದವಾಗಲಿದೆ. ಬಿನ್ನಿಪೇಟೆಯಲ್ಲೂ ಒಂದು ಸ್ಕೈ ವಾಕ್ ಅಗತ್ಯ ಇದ್ದು ಸದ್ಯದಲ್ಲಿಯೇ ಅದನ್ನು ಮಾಡಲಿದ್ದೇವೆ. ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಬೆಂಗಳೂರು ಮತ್ತು ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ. ಅಭಿವೃದ್ಧಿ ವಿಚಾರದಲ್ಲಿ ಜನರ ಸಹಕಾರವೂ ಬಹಳ ಮುಖ್ಯ.

ಈ ಸಂದರ್ಭದಲ್ಲಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಇಲಾಖೆ ರಾಜ್ಯ ಸಚಿವರಾದ ಶ್ರೀ ವಿ ಸೋಮಣ್ಣ
ಬೆಂಗಳೂರು ಅಭಿವೃದ್ಧಿ ಸಚಿವರಾದ ಶ್ರೀ ಕೃಷ್ಣ ಭೈರೇಗೌಡ , ಸಂಸದರಾದ ಶ್ರೀ ಪಿ.ಸಿ ಮೋಹನ್‌, ರಾಜ್ಯಸಭಾ ಸದಸ್ಯರಾದ ಶ್ರೀ ಲೆಹರ್ ಸಿಂಗ್, ರೈಲ್ವೆ ಅಧಿಕಾರಿಗಳು ಹಾಗೂ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img