Wednesday, July 15, 2026
25.7 C
Belagavi

“ಕುರುಬ ಸಮುದಾಯವನ್ನು ಶೈಕ್ಷಣಿಕವಾಗಿ ಉನ್ನತೀಕರಿಸಬೇಕಿದೆ, ಕುರುಬರನ್ನು STಗೆ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ”

advertisement

spot_img

ಸಂಗೊಳ್ಳಿ ರಾಯಣ್ಣರ ಹೆಸರು ಶಾಶ್ವತಗೊಳಿಸಲು ರಾಯಣ್ಣ ಪ್ರಾಧಿಕಾರ ರಚಿಸಲಾಯಿತು: ಸಿ.ಎಂ.ಸಿದ್ದರಾಮಯ್ಯ..

ಸಮೀಕ್ಷೆ ವೇಳೆ ಕುರುಬ ಅಂತಲೇ ಜಾತಿ ಬರೆಸಿ: ಹೀಗಾದ್ರೆ ಮಾತ್ರ ಸಮಾಜದ ಸ್ಥಿತಿ ಗತಿಯ ಸ್ಪಷ್ಟ ಚಿತ್ರಣ ಮತ್ತು ಸಾಮಾಜಿಕ ಅನುಕೂಲ ಸಿಗುತ್ತದೆ: ಸಿ.ಎಂ..

ರಾಜ್ಯದ ಎಲ್ಲಾ ಜಾತಿ ಸಮುದಾಯಗಳ ಸ್ಪಷ್ಟ ಸ್ಥಿತಿ ಅರಿಯಲು ಸಮೀಕ್ಷೆ ನಡೆಸಲಾಗುತ್ತಿದೆ: ಸಿ.ಎಂ.ಸಿದ್ದರಾಮಯ್ಯ..

ಕುರುಬ ಸಮುದಾಯವನ್ನು ST ಗೆ ಸೇರಿಸಲು ಮತ್ತೆ ಕೇಂದ್ರಕ್ಕೆ ಶಿಫಾರಸ್ಸು: ಸಿ.ಎಂ ಭರವಸೆ..

ಕಲ್ಬುರ್ಗಿ : ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ಸಮೀಕ್ಷೆ ವೇಳೆ ಕುರುಬ ಅಂತಲೇ ಜಾತಿ ಹೆಸರನ್ನು ಬರೆಸಿದರೆ ಮಾತ್ರ ಸಮಾಜದ ಸ್ಥಿತಿ ಗತಿಯ ಸ್ಪಷ್ಟ ಚಿತ್ರಣ ಮತ್ತು ಸಾಮಾಜಿಕ‌ ಅನುಕೂಲಗಳು ಸಿಗುತ್ತವೆ ಎಂದು ಕರೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು

ರಾಜ್ಯದ ಎಲ್ಲಾ ಜಾತಿ ಸಮುದಾಯಗಳ ಸ್ಪಷ್ಟ ಸ್ಥಿತಿ ಅರಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂದರು.

ಕರ್ನಾಟಕ ರಾಜ್ಯ ಕುರುಬಗೊಂಡ ಸಂಘ ಮತ್ತು ಸಂಗೊಳ್ಳಿ ರಾಯಣ್ಣ ಯುವಕ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಯಣ್ಣ ಅವರ ಮೂರ್ತಿ ಅನಾವರಣಗೊಳಿಸಿ, ನಗರ ಸಿಟಿ ಬಸ್ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣರ ಹೆಸರು ನಾಮಕರಣ ಮಾಡಿ ಮಾತನಾಡಿದರು.

ಕುರುಬ ಸಮುದಾಯವನ್ನು ST ಗೆ ಸೇರಿಸಲು ಹಿಂದೆಯೇ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಇದನ್ನು ಕೇಂದ್ರ ಸರ್ಕಾರ ವಾಪಾಸ್ ಕಳುಹಿಸಿದೆ. ಹೀಗಾಗಿ ಮತ್ತೆ ಹೆಚ್ಚುವರಿ ಅಂಕಿ ಅಂಶಗಳು ಮತ್ತು ದಾಖಲೆಗಳ ಸಮೇತ ಕೇಂದ್ರಕ್ಕೆ ಮತ್ತೆ ಶಿಫಾರಸ್ಸು ಕಳುಹಿಸಲಾಗುವುದು ಎಂದು ಸಿ.ಎಂ ಭರವಸೆ ನೀಡಿದರು.

ರಾಯಣ್ಣ ಜನ್ಮ ದಿನ ಸ್ವಾತಂತ್ರ್ಯೋತ್ಸವದ ಆಗಸ್ಟ್ 15. ರಾಯಣ್ಣರನ್ನು ಬ್ರಿಟಿಷರು ಗಲ್ಲಿಗೆ ಏರಿಸಿದ್ದು ಜನವರಿ 26ರ ಗಣರಾಜ್ಯೋತ್ಸವ ದಿನದಂದು. ಇದು ಕಾತಾಳೀಯ ಆದರೂ ಸತ್ಯವಾದ ಸಂಗತಿ ಎಂದರು. ಸ್ವಾತಂತ್ರ್ಯ ಸೇನಾನಿ ರಾಯಣ್ಣ ಯುವಕರಿಗೆ ಪ್ರೇರಣೆ ಆಗಿದ್ದಾರೆ ಎಂದರು.‌

ಶೇ7 ರಷ್ಟಿರುವ ಕುರುಬ ಸಮುದಾಯ ಶಿಕ್ಷಣದಲ್ಲಿ ಬಹಳ ಹಿಂದುಳಿದಿದೆ. ಆದ್ದರಿಂದ ಸಮುದಾಯದ ಪ್ರತಿಯೊಬ್ಬರೂ ವಿದ್ಯಾವಂತರಾಗುವುದು ಅವಶ್ಯವಾಗಿದೆ. ಸಮುದಾಯವನ್ನು ಶಿಕ್ಷಣ ಕ್ಷೇತ್ರದಲ್ಲಿ ಉನ್ನತೀಕರಿಸಬೇಕಿದೆ ಎಂದರು.

ಇಡೀ ರಾಜ್ಯ ಪ್ರವಾಸ ಮಾಡಿ ಕನಕ ಗುರುಪೀಠ ಸ್ಥಾಪಿಸಿದೆವು. ಪೀಠದ ಉದ್ದೇಶ, ಎಲ್ಲಾ ಶೋಷಿತ ಸಮುದಾಯಗಳಿಗೂ ಶಿಕ್ಷಣ ಕೊಡುವುದೇ ಆಗಿತ್ತು. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ನಾರಾಯಣಗುರು ಇಬ್ಬರೂ ಶಿಕ್ಷಣದಿಂದ ಸ್ವತಂತ್ರ ರಾಗಬಹುದು, ಸ್ವಾಭಿಮಾನಿಗಳಾಗಬಹುದು ಎಂದು ಹೇಳಿದ್ದಾರೆ. ಜಾತಿ ವ್ಯವಸ್ಥೆಯ ಕಾರಣಕ್ಕೆ ಅಸಮಾನತೆ ಸೃಷ್ಟಿಯಾಗಿದೆ ಎಂದರು.

ಜಾತಿ ರಹಿತ, ವರ್ಗ ರಹಿತ ಸಮಾಜ ಆಗಬೇಕು ಎನ್ನುವುದು ಬುದ್ದ, ಬಸವ, ಅಂಬೇಡ್ಕರ್ ಎಲ್ಲರ ಆಶಯವಾಗಿತ್ತು. ನಮ್ಮ ಸರ್ಕಾರ ಕೂಡ ಅಸಮಾನತೆ ಹೋಗಲಾಡಿದರು ಹತ್ತು ಹಲವು ಭಾಗ್ಯಗಳನ್ನು ನೀಡಿ, ಗ್ಯಾರಂಟಿಗಳನ್ನು ಜಾರಿಗೆ ತಂದಿದೆ ಎಂದರು.

ಆರ್ಥಿಕ ಚಲನೆ ಇಲ್ಲದ ಸಮಾಜ ಪ್ರಗತಿ ಕಾಣಲು ಸಾಧ್ಯವಿಲ್ಲ. ಆದ್ದರಿಂದ ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಿತ ಸಮುದಾಯಗಳು ಚಲನೆ ಕಂಡುಕೊಳ್ಳಬೇಕು. ಆಗಲೇ ಬುದ್ದ, ಬಸವ, ಅಂಬೇಡ್ಕರ್ ಕನಸು ನನಸಾಗುತ್ತದೆ. ಈ ಕನಸು ನನಸಾಗುವ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗಲೇ ಹಿಂದುಳಿದವರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡಿಸಿದ್ಧೆ ಎಂದರು.

ರಾಜ್ಯ ಸುತ್ತಿ ಮಠ ಮಾಡಿದ್ದು ನಾವು: ಸಿ.ಎಂ..

ಇಡೀ ರಾಜ್ಯ ಸುತ್ತಿ ಮಠ ಮಾಡಿದ್ದು ನಾವು. ಆದರೆ ಈಗ ಕೆಲವು ಡೋಂಗಿ ಜನ‌ ನಾವೇ ಮಠ ಮಾಡಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ. ಅವರ ಮಾತು ನಂಬಬೇಡಿ. ತೀರ್ಮಾನ ನಿಮಗೆ ಬಿಡ್ತೀನಿ. ನಿಮ್ಮ ಪ್ರೀತಿ, ವಿಶ್ವಾಸ ಸದಾ ನನ್ನ ಮೇಲೆ ಇರಲಿ. ನಾನು ರಾಜಕಾರಣ ಮಾಡೋದೇ ಸಾಮಾಜಿಕ ನ್ಯಾಯಕ್ಕಾಗಿ. ನಾನು ಅಧಿಕಾರದಲ್ಲಿ ಇರಲಿ, ಬಿಡಲಿ ಸಾಮಾಜಿಕ ನ್ಯಾಯಕ್ಕಾಗಿಯೇ ಕೆಲಸ ಮಾಡ್ತೀನಿ. ನಾವೆಲ್ಲರೂ ಕನಕದಾಸರು ಮತ್ತು ಸಂಗೊಳ್ಳಿ ರಾಯಣ್ಣ ಅವರು ನಡೆದ ದಾರಿಯಲ್ಲೇ ನಡೆಯೋಣ ಎಂದು ಕರೆ ನೀಡಿದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img