Monday, June 1, 2026
23.7 C
Belagavi

ಬಸವರಾಜ ಕಟ್ಟಿಮನಿ ಕಥೆಗಳಲ್ಲಿ ಸಮಾಜ ಸುಧಾರಣೆಯ ಧೀರತನವಿದೆ – ಶಿದ್ಲಿಂಗ ಗಾಳಿ

advertisement

spot_img

ರಾಮದುರ್ಗ: ಪ್ರಗತಿಶೀಲ ಸಾಹಿತ್ಯ ಪಂಥದ ಪ್ರಮುಖ ಕಥೆಗಾರರಾದ ಬಸವರಾಜ ಕಟ್ಟಿಮನಿ ಅವರ ಕಥೆಗಳಲ್ಲಿ ಗಾಢವಾದ ಜೀವನಾನುಭವ, ಹಳೆಯ ಸಂಪ್ರದಾಯಕ್ಕೆ ಮನಿಯದೇ ಹೊಸದನ್ನು ಹುಟ್ಟು ಹಾಕುವ,ಸಮಾಜ ಸುಧಾರಣೆಯ ಧೀರತನದ ಮನೋಭಾವನೆಗಳು ಸ್ಪಷ್ಟವಾಗಿ ಎದ್ದು ಕಾಣುತ್ತವೆ ಎಂದು ಯರಗಟ್ಟಿ ಸಿಎಂ ಮಾಮನಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಶಿದ್ಲಿಂಗ ಗಾಳಿ ಅಭಿಪ್ರಾಯಸಿದರು.

ರಾಮದುರ್ಗದ ಈರಮ್ಮ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ, ಕನ್ನಡ ವಿಭಾಗ ಮತ್ತು ಬೆಳಗಾವಿ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಬುಧವಾರ ಜರುಗಿದ ಕಟ್ಟಿಮನಿ ಕಥಿ ಹೇಳೂಣು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಗಾಳಿ ಅವರು, ಕಟ್ಟಿಮನಿ ಅವರ ಕಥೆಗಳಲ್ಲಿ ಖಡ್ಗದ ಹರಿತ, ಬೆಂಕಿಯಂಥ ಕಿಡಿಗಳು, ಮಿಂಚಿನಂಥ ಹೊಳಪು ಮತ್ತು ವಜ್ರದಂತ ಕಾಠಿಣ್ಯತೆಗಳನ್ನು ಕಾಣುತ್ತೇವೆ. ಕಟ್ಟಿಮನಿ ಅವರ ಕಥೆಗಳ ವಸ್ತುವಿನ ಆಯ್ಕೆಯಲ್ಲಿ ಸ್ಪಷ್ಟತೆ, ಖಚಿತವಾದ ಧೋರಣೆಗಳಿದ್ದು, ಸಣ್ಣ- ಸಣ್ಣ ಘಟನಾವಳಿಗಳನ್ನು ಅತ್ಯಂತ ಮಾರ್ಮಿಕವಾಗಿ ಸಮಾಜಮುಖಿಯಾಗಿ ಕಥೆಗಳನ್ನು ರಚಿಸುವ ಮೂಲಕ ಬಸವರಾಜ ಕಟ್ಟಿಮನಿ
ಅವರು ಒಬ್ಬ ಶ್ರೇಷ್ಠ ಕಥೆಗಾರರಾಗಿ ಕನ್ನಡ ಸಾಹಿತ್ಯದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ ಎಂದರು.

ಇನ್ನೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಸದಸ್ಯ ಪ್ರೊ. ಎಸ್ ಜಿ. ಚಿಕ್ಕನರಗುಂದ ಅವರು ಬಸವರಾಜ ಕಟ್ಟಿಮನಿ ಓರ್ವ ಜಾತ್ಯತೀತ ವ್ಯಕ್ತಿಯಾಗಿ ಬದುಕಿದವರು.ಬದುಕಿದಂತೆ ಬರೆದವರು. ಅವರ ಕಥೆಗಳೆಲ್ಲವೂ ವಾಸ್ತವತೆಯ ಪ್ರತಿನಿಧಿಗಳಾಗಿವೆ ಎಂದು ಹೇಳಿದರು.
ಕಾಲೇಜಿನ ಐಕ್ಯುಎಸಿ ಸಂಯೋಜಕ ಪ್ರೊ. ಸಂಜಯ ಹಾದಿಮನಿ ಮಾತನಾಡಿ, ಬಸವರಾಜ ಕಟ್ಟಿಮನಿಯವರ ಕಥೆಗಳು ಅತ್ಯಂತ ಸರಳವಾಗಿದ್ದು, ಬದುಕಿನ ಬದುಕಿನ ಬವಣೆಗಳನ್ನು ತುಂಬಾ ಮಾರ್ಮಿಕವಾಗಿ ತಿಳಿಸಿ ಕೊಡುತ್ತವೆ ಎಂದು ಹೇಳಿದರು
ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಾ.ಎಂ. ಡಿ. ಕಮತಗಿ ವಹಿಸಿದ್ದರು.ಕಟ್ಟಿಮನಿ ಕಥಿ ಹೇಳೂಣು ಸ್ಪರ್ಧೆಯಲ್ಲಿ ಸುಮಾರು 25ಕ್ಕೂ ಹೆಚ್ಚು ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು. ಅವರುಗಳಲ್ಲಿ ಅಜಯ ಬಿರಾದರ ಪಾಟೀಲ (ಪ್ರಥಮ), ರಕ್ಷಿತಾ ಕಾಳೆ (ದ್ವಿತೀಯ ), ಶಿವಾನಂದ ಕಳ್ಳಿಮನಿ (ತೃತೀಯ ) ಹಾಗೂ ಪೂರ್ಣಿಮಾ ಶಿಪ್ರಿ ಸಮಾಧಾನಕರ ಬಹುಮಾನವನ್ನು ಪಡೆದುಕೊಂಡಿದ್ದು, ಬಹುಮಾನ ವಿಜೇತರಿಗೆ ಗಣ್ಯರು ಪ್ರಶಸ್ತಿ ಪತ್ರ ಹಾಗೂ ನಗದನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಐಕ್ಯೂಎಸಿ ಸಂಯೋಜಕ ಸಂಜಯ ಹಾದಿಮನಿ, ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಮ್. ಆರ್ ದೊಡ್ಡಮನಿ, ಡಾ. ವೆಂಕಟೇಶ
ಪರಶುರಾಮ ಮುಕಾರಿ,ಡಾ.ವಾಯ. ಎಸ್.ಹೊಸಮನಿ, ಯಲ್ಲಪ್ಪ ಕುರಿ, ಮಾರುತಿ ಸುಳಿಕೇರಿ, ಸೋಮೇಶ ಹೊಸಕೋಟಿ, ಡಾ ಮಹಾಲಕ್ಷ್ಮಿಭೂಶಿ ಸೇರಿದಂತೆ ಕಾಲೇಜಿನ ಎಲ್ಲ ಪ್ರಾಧ್ಯಾಪಕ ಸಿಬ್ಬಂದಿ ವರ್ಗ ಇದ್ದರು.
ಕಾಲೇಜಿನ ವಿದ್ಯಾರ್ಥಿನಿ ಯಮುನಾ ಕಾಳಂಗಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಕಾವ್ಯಾ ಶಿಂಧೆ ಹಾಗೂ ಸಂಗಡಿಗರು ಸ್ವಾಗತಗೀತೆ ಹಾಡಿದರು. ಕನ್ನಡ ಉಪನ್ಯಾಸಕ ಡಾ.ರಾಜು ಕಂಬಾರ ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಂ ಆರ್. ದೊಡಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಕೃತಿಕಾ ಚಿಕ್ಕೊರಮಠ ಮತ್ತು ಪೂರ್ಣಿಮಾ ಶಿಪ್ರಿ ನಿರೂಪಿಸಿದರು. ಶಿವಲೀಲಾ ಹಡಪದ ವಂದಿಸಿದರು.

ರಾಮದುರ್ಗ ಪಟ್ಟಣದ ಈರಮ್ಮ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಆಯ್ತು ಎಸಿ ಕನ್ನಡ ವಿಭಾಗ ಮತ್ತು ಬೆಳಗಾವಿಯ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಕಟ್ಟಿಮನಿ ಕಥಿ ಹೇಳೂಣು ಕಾರ್ಯಕ್ರಮವನ್ನು ಯರಗಟ್ಟಿ ಸಿಎಂ ಮಾಮುನಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಅಧ್ಯಾಪಕ ಶಿದ್ಲಿಂಗ ಗಾಳಿ ಸಸಿಗೆ ನೀರೂಣಿಸುವ ಮೂಲಕ ಉದ್ಘಾಟಿಸಿದರು.ರಾಮದುರ್ಗ ಪಟ್ಟಣದ ಈರಮ್ಮ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಆಯ್ತು ಎಸಿ ಕನ್ನಡ ವಿಭಾಗ ಮತ್ತು ಬೆಳಗಾವಿಯ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಕಟ್ಟಿಮನಿ ಕಥಿ ಹೇಳೂಣು ಕಾರ್ಯಕ್ರಮದಲ್ಲಿ ಕಥಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಗಣ್ಯರು ಸತ್ಕರಿಸಿ ಗೌರವಿಸಿದರು.

ರಾಮದುರ್ಗ ಪಟ್ಟಣದ ಈರಮ್ಮ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಆಯ್ತು ಎಸಿ ಕನ್ನಡ ವಿಭಾಗ ಮತ್ತು ಬೆಳಗಾವಿಯ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಕಟ್ಟಿಮನಿ ಕಥಿ ಹೇಳೂಣು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಡಾ.ಎಂ.ಡಿ.ಕಮತಗಿ ಮಾತನಾಡಿದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img