ಧಮ್ಕಿ ಪ್ರಕರಣ – ರಾಜೀವ್ ಗೌಡನನ್ನು 2 ದಿನ ಕಸ್ಟಡಿಗೆ ಪಡೆದ ಪೊಲೀಸರು!
ಪೌರಾಯುಕ್ತೆಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿದ್ದ ರಾಜೀವ್ ಗೌಡನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯವು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಧಮ್ಕಿ ಹಾಕಿದ ಆರೋಪದ ಮೇಲೆ ರಾಜೀವ್ ಗೌಡನನ್ನು ಬಂಧಿಸಲಾಗಿದ್ದು, ಈಗ ನ್ಯಾಯಾಲಯದ ಆದೇಶದ ಮೇರೆಗೆ 2 ದಿನಗಳ ಕಾಲ ತೀವ್ರ ವಿಚಾರಣೆ ನಡೆಸಲು ಪೊಲೀಸರು ಸಜ್ಜಾಗಿದ್ದಾರೆ.
ಶಿಡ್ಲಘಟ್ಟ ಇನ್ಸ್‌ಪೆಕ್ಟರ್ ಆನಂದ್ ಕುಮಾರ್ ನೇತೃತ್ವದ ತಂಡವು ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ರಾಜೀವ್ ಗೌಡ ಟ್ರಾವೆಲ್ ಹಿಸ್ಟರಿ, ಮೊಬೈಲ್ ಟ್ರ್ಯಾಕ್ ಆಧರಿಸಿ ತನಿಖೆ ನಡೆಸಲಿದ್ದಾರೆ.
ತಲೆಮರೆಸಿಕೊಂಡಿದ್ದ ಅವಧಿಯಲ್ಲಿ ಆರೋಪಿ ಎಲ್ಲೆಲ್ಲಿಗೆ ಭೇಟಿ ನೀಡಿದ್ದ ಎಂಬ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಮಂಗಳೂರು ಸೇರಿ ಹಲವು ಕಡೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.



