Wednesday, August 12, 2026
20.7 C
Belagavi

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

advertisement

spot_img

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ

ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುರಂತ ಸ್ಥಳಕ್ಕೆ ಧಾವಿಸಿ ಬಂದ ಕೇಂದ್ರ ಸಚಿವರು; ರಾತ್ರಿ 1.30 ಗಂಟೆವರೆಗೂ ವಿಶಾಖಪಟ್ಟಣದಲ್ಲಿ ಸಚಿವರು

ದುರಂತ ಸ್ಥಳದಲ್ಲಿ ವಿಸ್ತೃತ ಪರಿಶೀಲನೆ; ವರದಿ ನೀಡುವಂತೆ ಆಡಳಿತ ವರ್ಗಕ್ಕೆ ಸೂಚನೆ

ವೃತ್ತ ಕಾರ್ಮಿಕರಿಗೆ 25 ಲಕ್ಷ ಪರಿಹಾರ, ಅವರ ಮಕ್ಕಳ ಶಿಕ್ಷಣದ ಹೊಣೆ

ಗಾಯಾಳುಗಳಿಗೆ ₹10 ಲಕ್ಷ ಪರಿಹಾರ

ವಿಶಾಖಪಟ್ಟಣ (ಆಂಧ್ರಪ್ರದೇಶ) 

ಇಲ್ಲಿನ ವಿಶಾಖ ಉಕ್ಕು ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಹಲವು ಕಾರ್ಮಿಕರು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ಬಂದ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ವಿಸೃತವಾಗಿ ಪರಿಶೀಲನೆ ನಡೆಸಿದರು.

ದುರಂತದ ಮಾಹಿತಿ ತಿಳಿಯುತ್ತಿದ್ದಂತೆ ಬೆಂಗಳೂರಿನಿಂದ ವಿಶಾಖಪಟ್ಟಣಕ್ಕೆ ಧಾವಿಸಿದ ಸಚಿವರು, ವಿಮಾನ ನಿಲ್ದಾಣದಿಂದ ನೇರವಾಗಿ ದುರ್ಘಟನೆ ಸಂಭವಿಸಿದ ಸ್ಥಳಕ್ಕೆ ತೆರಳಿದರು.

ಉಕ್ಕು ಕರಗಿಸುವ ಘಟಕದಲ್ಲಿನ ಉಷ್ಣ ನಿರೋಧಕ ದ್ರವರೂಪದ ಕೊಳಗದಿಂದ ದ್ರವರೂಪದ ಲೋಹ ಸೋರಿಕೆಯಾದ ಹಿನ್ನೆಲೆಯಲ್ಲಿ ಸ್ಪೋಟ ಸಂಭವಿಸಿ ದುರಂತ ಘಟಿಸಿರಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದು, ಈ ಬಗ್ಗೆ ಸಚಿವ ಕುಮಾರಸ್ವಾಮಿ ಅವರಿಗೆ ವಿವರಣೆ ನೀಡಿದರು.

ದುರಂತ ನಡೆದ ಸ್ಥಳವನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಿದ ಕೇಂದ್ರದ ಉಕ್ಕು ಸಚಿವರು; ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದರು.

ಅಲ್ಲದೆ, ದುರಂತದಲ್ಲಿ ಸಾವನ್ನಪ್ಪಿದ ಕಾರ್ಮಿಕರ ಬಗ್ಗೆ ಹಾಗೂ ದುರಂತಕ್ಕೆ ಕಾರಣವಾದ ಅಂಶಗಳ ಬಗ್ಗೆ ತಕ್ಷಣವೇ ವರದಿ ನೀಡುವಂತೆ ಕಾರ್ಖಾನೆಯ ಆಡಳಿತ ಮಂಡಳಿಗೆ ಸಚಿವ ಕುಮಾರಸ್ವಾಮಿ ಅವರು ಸೂಚನೆ ನೀಡಿದರು.ತಲಾ ₹25 ಲಕ್ಷ ಪರಿಹಾರ ಪ್ಯಾಕೇಜ್ ಘೋಷಿಸಿದ ಹೆಚ್ಡಿಕೆ:

ದುರಂತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರಲ್ಲಿ ಒಬ್ಬರಿಗೆ ಉದ್ಯೋಗ ಮತ್ತು ಅವರಿಗೆ ದೊರೆಯುವ ಪ್ರಯೋಜನಗಳ ಜತೆಗೆ ₹25 ಲಕ್ಷ ಪರಿಹಾರವನ್ನು ನೀಡಲಾಗುವುದು. ತೀವ್ರವಾಗಿ ಗಾಯಗೊಂಡ ಕಾರ್ಮಿಕರಿಗೆ ₹10 ಲಕ್ಷ ಪರಿಹಾರ ನೀಡಲಾಗುವುದು. ಅಲ್ಲದೆ ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಸಂಪೂರ್ಣವಾಗಿ ಕಾರ್ಖಾನೆಗೆ ಭರಿಸಲಿದೆ ಎಂದು ಸಚಿವರು ಘೋಷಿಸಿದರು.

ಜತೆಗೆ, ಮೃತರ ಕುಟುಂಬ ಸದಸ್ಯರು ಮೃತರ ನಿವೃತ್ತಿಯ ದಿನಾಂಕದವರೆಗೆ ಸ್ಟೀಲ್ ಪ್ಲಾಂಟ್ ಟೌನ್‌ಶಿಪ್‌ನಲ್ಲಿ ತಮ್ಮ ವಸತಿ ಗೃಹಗಳಲ್ಲಿ ವಾಸಿಸಲು ಅನುಮತಿಸಲಾಗಿದೆ. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ. ಹಾಗೆಯೇ, ಮೃತ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸದ ವೆಚ್ಚವನ್ನು ಕಾರ್ಖಾನೆ ಭರಿಸಲಿದೆ ಎಂದು ಸಚಿವರು ಹೇಳಿದರು.

ರಾತ್ರಿ ಒಂದುವರೆವರೆಗೂ ಆಸ್ಪತ್ರೆಯಲ್ಲೇ ಇದ್ದ ಸಚಿವರು

ದುರ್ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಬೆಂಗಳೂರಿನಿಂದ ವಿಶಾಖ ಕಾರ್ಖಾನೆಗೆ ಧಾವಿಸಿಬಂದ ಸಚಿವರು, ದುರ್ಘಟನಾ ಸ್ಥಳ ಪರಿಶೀಲಿಸಿದ ನಂತರ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

ನಂತರ ಮೃತ ಕಾರ್ಮಿಕರ ಕುಟುಂಬಗಳ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ₹25 ಲಕ್ಷ ಹಾಗೂ ಗಾಯಾಳುಗಳಿಗೆ ₹10 ಲಕ್ಷ ಪರಿಹಾರ ಘೋಷಿಸಲಾಗಿದೆ. ಅಲ್ಲದೆ, ಮೃತ ಕಾರ್ಮಿಕರ ಪ್ರತಿ ಕುಟುಂಬ ಅರ್ಹ ಸದಸ್ಯರಿಗೆ ಕಾರ್ಖಾನೆಯಲ್ಲಿ ಉದ್ಯೋಗವನ್ನೂ ಸಹ ನೀಡಲಾಗುವುದು. ಗಾಯಗೊಂಡವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಕಾರ್ಖಾನೆ ಭರಿಸುತ್ತದೆ. ಮೃತ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಸರ್ವ ನೆರವನ್ನು ನೀಡಲಾಗುವುದು. ಈ ದುರ್ಘಟನೆ ಬಗ್ಗೆ ನನಗೆ ತೀವ್ರ ಆಘಾತ ಉಂಟಾಗಿದೆ. ದುರಂತದ ಕಾರಣವನ್ನು ಪತ್ತೆ ಹಚ್ಚಲು ಸ್ವತಂತ್ರ ತನಿಖೆಗೆ ಆದೇಶಿಸಲಾಗಿದೆ.

-ಹೆಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವರು

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img