ಮುಧೋಳದಲ್ಲಿಂದು ಕೃಷಿಯಲ್ಲಿ ಎಐ ತಂತ್ರಜ್ಞಾನ ಸದ್ಬಳಕೆ, ಕಬ್ಬಿನ ಅಧಿಕ ಇಳುವರಿ, ಪ್ರಮುಖ ಕೀಟ ಬಾಧೆಗಳ ನಿಯಂತ್ರಣ ಹಾಗೂ ಸುಧಾರಿತ ಬೇಸಾಯ ಕ್ರಮಗಳ ಕುರಿತು ಆಯೋಜಿಸಲಾಗಿದ್ದ ಕಾರ್ಯಾಗಾರದಲ್ಲಿ ಭಾಗವಹಿಸಿ ನಮ್ಮ ರೈತರೊಂದಿಗೆ ಮತ್ತು ಸಂಬಂಧಪಟ್ಟ ಇಲಾಖೆಯ ತಜ್ಞರೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದೆ.
ವಿಜ್ಞಾನ ಹಾಗೂ ತಂತ್ರಜ್ಞಾನದ ಬದಲಾವಣೆಗೆ ಅನುಗುಣವಾಗಿ ನಮ್ಮ ರೈತ ಸಮುದಾಯವನ್ನು ಸಜ್ಜುಗೊಳಿಸಿ ಅವರನ್ನು ಆರ್ಥಿಕವಾಗಿ ಸಶಕ್ತಗೊಳಿಸಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.