Wednesday, August 12, 2026
20.7 C
Belagavi

ನಮ್ಮ ಕುಟುಂಬದ ಸಮಸ್ಯೆ ನಾವು ಬಗೆಹರಿಸಿಕೊಳ್ಳುತ್ತೇವೆ: ಸಿಎಂ ಡಿ.ಕೆ. ಶಿವಕುಮಾರ್

advertisement

spot_img

ನಮ್ಮ ಕುಟುಂಬದ ಸಮಸ್ಯೆ ನಾವು ಬಗೆಹರಿಸಿಕೊಳ್ಳುತ್ತೇವೆ: ಸಿಎಂ ಡಿ.ಕೆ. ಶಿವಕುಮಾರ್

ಮಳೆ, ಗುಡುಗು, ಸಿಡಿಲು ಇವೆಲ್ಲ ಸಹಜ

ಪಕ್ಷ ಬಿಟ್ಟು ಹೋಗುವೆ ಎಂದು ರಾಮಲಿಂಗಾರೆಡ್ಡಿ ಅವರು ಎಲ್ಲಾದರೂ ಹೇಳಿದ್ದಾರೆಯೇ?

ಬೆಂಗಳೂರು, ಜೂ.06:

“ನಮ್ಮ ಕುಟುಂಬದ ಸಮಸ್ಯೆ ನಾವು ಬಗೆಹರಿಸಿಕೊಳ್ಳುತ್ತೇವೆ. ನಾನು ಮುಖ್ಯಮಂತ್ರಿ, ಅವರು (ರಾಮಲಿಂಗಾರೆಡ್ಡಿ) ಸಚಿವರು. ಆದರೂ ನಾವೆಲ್ಲರೂ ಸ್ನೇಹಿತರು. ರಾಮಲಿಂಗಾರೆಡ್ಡಿ ಅವರು ಪಕ್ಷದ ಹಿರಿಯರು, ಬೆಂಗಳೂರಿನಲ್ಲಿ ಪಕ್ಷ ಉಳಿಸುತ್ತಿರುವವರು. ಪಕ್ಷ ಬೆಳೆಸಲು ಕೆಲಸ ಮಾಡುತ್ತಿರುವವರು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ರಾಮಲಿಂಗಾರೆಡ್ಡಿ ಅವರ ಜತೆ ಶುಕ್ರವಾರ ತಡರಾತ್ರಿವರೆಗೂ ಸಮಾಲೋಚನೆ ನಡೆಸಿದ ಬಳಿಕ ಖಾಸಗಿ ಹೊಟೇಲ್ ಬಳಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.ರಾಮಲಿಂಗಾರೆಡ್ಡಿ ಅವರ ಮುನಿಸು ಶಮನವಾಗಿದೆಯೇ ಎಂದು ಕೇಳಿದಾಗ ಹೀಗೆ ಉತ್ತರಿಸಿದರು.

ಅದೇ ಖಾತೆಯಲ್ಲೇ ಮುಂದುವರೆಯುತ್ತಾರೆಯೇ ಎಂದು ಕೇಳಿದಾಗ, “ನಾವು ಖಾತೆ ವಿಚಾರವಾಗಿ ಏನು ಮಾತನಾಡಿದ್ದೇವೆ, ಬೇರೆ ಯಾವ ವಿಚಾರ ಮಾತನಾಡಿದ್ದೇವೆ ಎಂದೆಲ್ಲಾ ಮಾಧ್ಯಮಗಳ ಮುಂದೆ ಹೇಳಲು ಆಗುತ್ತದೆಯೇ?” ಎಂದು ಮರುಪ್ರಶ್ನಿಸಿದರು.

ಇಂತಹ ಬೆಳವಣಿಗೆಗಳ ಬಗ್ಗೆ ಕೇಳಿದಾಗ, “ಇದೆಲ್ಲಾ ಆಗುತ್ತಾ ಇರಬೇಕು‌. ಮಳೆ, ಗುಡುಗು, ಸಿಡಿಲು‌, ಸೂರ್ಯ ಮುಳುಗುವುದು, ಹುಟ್ಟುವುದು ಸಹಜ” ಎಂದು ಹೇಳಿದರು.

ರಾಮಲಿಂಗಾರೆಡ್ಡಿ ಅವರು ಖಾತೆ ಬದಲಾವಣೆಗೆ ಒಪ್ಪಿಕೊಂಡಿದ್ದಾರೆಯೇ ಎಂದು ಕೇಳಿದಾಗ, “ಅವರು ಪಕ್ಷ ಬಿಟ್ಟು ಹೋಗುತ್ತಾರೆಯೇ? ಹಾಗೆಂದು ಹೇಳಿದ್ದಾರೆಯೇ? ಅವರು ತಮ್ಮ ನೋವನ್ನು ಹೇಳಿಕೊಂಡಿದ್ದಾರೆ. ಒಂದಷ್ಟು ತಪ್ಪು ಸಂವಹನ ಆಗಿದೆ. ಸರಿಪಡಿಸುತ್ತೇವೆ” ಎಂದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img