Saturday, April 11, 2026
36.1 C
Belagavi

ಬಿಜೆಪಿ ಸರ್ಕಾರದ ಅಕ್ರಮದಲ್ಲಿ ಯಾರು ರಾಜೀನಾಮೆ ಕೊಟ್ಟಿದ್ದರು?: ಡಿಸಿಎಂ ಡಿ.ಕೆ. ಶಿವಕುಮಾರ್

advertisement

spot_img

ಬಿಜೆಪಿ ಸರ್ಕಾರದ ಅಕ್ರಮದಲ್ಲಿ ಯಾರು ರಾಜೀನಾಮೆ ಕೊಟ್ಟಿದ್ದರು?: ಡಿಸಿಎಂ ಡಿ.ಕೆ. ಶಿವಕುಮಾರ್

ದಲಿತ ಸಚಿವರಿಗೆ ತೊಂದರೆ ನೀಡಲು ಬಿಜೆಪಿ ಪ್ರಯತ್ನ

ಮನರೇಗಾ ಬಗ್ಗೆ ಚರ್ಚೆ ನಡೆಯದಂತೆ ತಡೆಯಲು ಬಿಜೆಪಿ ಡ್ರಾಮಾ

ವಿಬಿ ಗ್ರಾಮ್ ಜಿ ಕಾಯ್ದೆ ಸಮರ್ಥಸಿಕೊಳ್ಳಲು ಬಿಜೆಪಿ ನಾಯಕರಿಗೆ ಸಾಧ್ಯವಿಲ್ಲ

ಬೆಂಗಳೂರು, ಫೆ.04:

“ಬಿಜೆಪಿ ಕಾಲದಲ್ಲಿ ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿತ್ತು. ಆಗ ಅವರ ಸರ್ಕಾರದಲ್ಲಿ ಯಾರು ರಾಜೀನಾಮೆ ಕೊಟ್ಟಿದ್ದರು? ದಲಿತ ಸಚಿವನಿಗೆ ತೊಂದರೆ ನೀಡಲು ಬಿಜೆಪಿ ನಾಯಕರು ಈ ರೀತಿ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಿಡಿಕಾರಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.

ಬಿಜೆಪಿ ನಾಯಕರು ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ ಎಂದು ಕೇಳಿದಾಗ, “ಬಿಜೆಪಿ ಸರ್ಕಾರದ ಅವಧಿಯಲ್ಲಿ ಏನೆಲ್ಲಾ ಭ್ರಷ್ಟಾಚಾರ ಆಗಿದೆ ಎಂದು ಸಚಿವರಾದ ತಿಮ್ಮಾಪುರ ಅವರು ತಿಳಿಸಿದ್ದಾರೆ. ಬಿಜೆಪಿ ಅವರು ಮಾಡುತ್ತಿರುವ ಆರೋಪಕ್ಕೆ ಸಾಕ್ಷಿ ಇಲ್ಲ. ಎಲ್ಲವೂ ಸುಳ್ಳು ಆರೋಪಗಳು. ವಿರೋಧ ಪಕ್ಷಗಳು ತಾವು ಬದುಕಿದ್ದೇವೆ ಎಂದು ತೋರಿಸಲು ಮುಂದಾಗಿದ್ದಾರೆ. ಮನರೇಗಾ ಯೋಜನೆ ಬಗ್ಗೆ ಚರ್ಚೆ ಮಾಡುವುದು ಬೇಕಾಗಿಲ್ಲ. ಹೀಗಾಗಿ ಅವರು ಡ್ರಾಮಾ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ತಮ್ಮ ಸರ್ಕಾರ ಜಾರಿಗೆ ತಂದಿರುವ ನೂತನ ಕಾಯ್ದೆ ಬಗ್ಗೆ ಚರ್ಚೆ ಮಾಡಲಿ. ಅವರಿಗೆ ಅದರ ಬಗ್ಗೆ ಚರ್ಚೆ ಮಾಡಲು ಯಾವುದೇ ಅಂಶವಿಲ್ಲ ಎಂದು ಈ ರೀತಿ ಮಾಡುತ್ತಿದ್ದಾರೆ. ಇದು ವಿಷಯಾಂತರ ಮಾಡುವ ಪ್ರಯತ್ನ” ಎಂದು ತಿರುಗೇಟು ನೀಡಿದರು.

ಬಿಜೆಪಿ ನಾಯಕರು ಚರ್ಚೆ ಮಾಡಲಿ:

“ಮನರೇಗಾ ಯೋಜನೆಯಿಂದ ಆಗಿರುವ ಅನುಕೂಲದ ಬಗ್ಗೆ ನಾವು ಚರ್ಚೆ ಮಾಡುತ್ತೇವೆ ಎಂಬುದನ್ನು ಅವರಿಗೆ ಸಹಿಸಲು ಆಗುತ್ತಿಲ್ಲ. ಮನರೇಗಾ ಕಾಯ್ದೆಯಲ್ಲಿ ಪ್ರತಿ ಪಂಚಾಯ್ತಿಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳುವ ಕೆಲಸ ನಿರ್ಧಾರ ಮಾಡಬಹುದಾಗಿತ್ತು. ಬಿಜೆಪಿ ವಿಬಿ ಗ್ರಾಮ್ ಜಿ ಕಾಯ್ದೆಯಲ್ಲಿ ಕೇಂದ್ರ ಸರ್ಕಾರ ನಿರ್ಧರಿಸಲಿದೆ. ಈ ಯೋಜನೆಯಿಂದ ಪ್ರತಿ ಹಳ್ಳಿಯಲ್ಲಿ ಎಷ್ಟು ದನದ ಕೊಟ್ಟಿಗೆ ಕಟ್ಟಿಸಬಹುದು, ಎಷ್ಟು ರೈತರ ಜಮೀನು ಮಟ್ಟ ಮಾಡಿಸಬಹುದು ಎಂದು ಬಿಜೆಪಿ ನಾಯಕರು ಹೇಳಲಿ” ಎಂದು ಸವಾಲೆಸೆದರು.

“ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಈ ಕಾಯ್ದೆ ಜಾರಿ ಅಸಾಧ್ಯ. ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ನಾವು ಇಟ್ಟುಕೊಂಡು ಕೂತಿದ್ದೇವೆ. ಈ ಬಗ್ಗೆ ಅವರು ಚರ್ಚೆ ಮಾಡಲಿ, ನಾವು ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.

Hot this week

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

Topics

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಹೆಚ್.ಡಿ. ಕುಮಾರಸ್ವಾಮಿ ಆರೋಪ

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಹೆಚ್.ಡಿ. ಕುಮಾರಸ್ವಾಮಿ ಆರೋಪ ಅಹಿಂದ ಹೆಸರಿನಲ್ಲಿ ನಿರಂತರವಾಗಿ...
spot_img

Related Articles

Popular Categories

spot_img