Saturday, April 11, 2026
36.1 C
Belagavi

ಅಥಣಿ ಸರ್ಕಾರಿ ಆಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ದಿಢೀರ್ ಭೇಟಿ:

advertisement

spot_img

ಅಥಣಿ ಸರ್ಕಾರಿ ಆಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ದಿಢೀರ್ ಭೇಟಿ: ವೈದ್ಯರ ಕಾರ್ಯವೈಖರಿಗೆ ಮೆಚ್ಚುಗೆ, ಮೂಲಸೌಕರ್ಯ ಸುಧಾರಣೆಗೆ ಸೂಚನೆ

ಚಿಕ್ಕೋಡಿ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ ಚೌದರಿ ಅವರು ಮಂಗಳವಾರ ಅಥಣಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ವ್ಯವಸ್ಥೆ ಹಾಗೂ ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಿದರು.
​ಆಸ್ಪತ್ರೆಯ ಹೆರಿಗೆ ವಾರ್ಡ್‌ಗೆ ಭೇಟಿ ನೀಡಿದ ಅಧ್ಯಕ್ಷರು, ಅಲ್ಲಿನ ಬಾಣಂತಿಯರು ಹಾಗೂ ಗರ್ಭಿಣಿಯರೊಂದಿಗೆ ವೈಯಕ್ತಿಕವಾಗಿ ಮಾತನಾಡಿ ಆರೋಗ್ಯ ವಿಚಾರಿಸಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಅಥಣಿ ಆಸ್ಪತ್ರೆಯಲ್ಲಿ ತಿಂಗಳಿಗೆ ಸರಾಸರಿ 400 ಹೆರಿಗೆಗಳಾಗುತ್ತಿವೆ. ಇಲ್ಲಿ ಮೂವರು ಸ್ತ್ರೀರೋಗ ತಜ್ಞರು ಹಾಗೂ ಇಬ್ಬರು ಅರಿವಳಿಕೆ ತಜ್ಞರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಸಂತಸದ ವಿಷಯ. ರೋಗಿಗಳು ಕೂಡ ವೈದ್ಯರ ಸೇವೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ,” ಎಂದು ಮೆಚ್ಚುಗೆ ಸೂಚಿಸಿದರು.
ಅಥಣಿ ವೈದ್ಯಾಧಿಕಾರಿಗೆ ಆಸ್ಪತ್ರೆಯಲ್ಲಿ ​ಮಾಹಿತಿ ಫಲಕಗಳ ಅಳವಡಿಕೆಗೆ ಸೂಚನೆ:
ಆಸ್ಪತ್ರೆಗೆ ಬರುವ ಬಡ ಜನರಿಗೆ ಸರ್ಕಾರದ ವಿವಿಧ ಯೋಜನೆಗಳಾದ ಸುಕನ್ಯಾ ಸಮೃದ್ಧಿ, ಎಬಿಎಆರ್‌ಕೆ ಹಾಗೂ ಜನನಿ ಶಿಶು ಸುರಕ್ಷಾ ಯೋಜನೆಗಳ ಬಗ್ಗೆ ಮಾಹಿತಿಯ ಕೊರತೆ ಇರುವುದನ್ನು ಗಮನಿಸಿದ ಅಧ್ಯಕ್ಷರು, ಆಸ್ಪತ್ರೆಯ ಆವರಣದಲ್ಲಿ ದೊಡ್ಡ ಟಿವಿ ಪರದೆ ಹಾಗೂ ಮಾಹಿತಿ ಫಲಕಗಳನ್ನು ಅಳವಡಿಸಿ ನಿರಂತರವಾಗಿ ಜಾಗೃತಿ ಮೂಡಿಸುವಂತೆ ತಾಲೂಕು ಆರೋಗ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
​ಔಷಧಿ ಕೊರತೆ ಬಗ್ಗೆ ಎಚ್ಚರಿಕೆ:ಕೆಲವು ರೋಗಿಗಳಿಗೆ ಕೆಮ್ಮಿನ ಸಿರಪ್ ಹಾಗೂ ಮುಲಾಮುಗಳನ್ನು ಹೊರಗಡೆಯಿಂದ ತರುವಂತೆ ಚೀಟಿ ಬರೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದವು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಆಸ್ಪತ್ರೆಯ ಆಡಳಿತ ಮಂಡಳಿಯು ಮುನ್ನೆಚ್ಚರಿಕೆ ವಹಿಸಿ ಕನಿಷ್ಠ 3 ತಿಂಗಳಿಗಾಗುವಷ್ಟು ಔಷಧಿಯನ್ನು ದಾಸ್ತಾನು ಇಟ್ಟುಕೊಳ್ಳಬೇಕು. ಬಡವರಿಗೆ ಯಾವುದೇ ಕಾರಣಕ್ಕೂ ಹೊರಗಡೆ ಔಷಧಿ ಖರೀದಿಸಲು ತಿಳಿಸಬಾರದು,” ಎಂದು ಎಚ್ಚರಿಸಿದರು.
ಆಸ್ಪತ್ರೆಯಲ್ಲಿ ​ಭ್ರಷ್ಟಾಚಾರದ ಆರೋಪ ವಿಚಾರವಾಗಿ ಮಾತನಾಡಿ
ಹೆರಿಗೆಗೆ ಹಣ ಪಡೆಯಲಾಗುತ್ತಿದೆ ಎಂಬ ಆರೋಪದ ಕುರಿತು ಉತ್ತರಿಸಿದ ನಾಗಲಕ್ಷ್ಮಿ ಚೌದರಿ, “ನಾನು ಖುದ್ದಾಗಿ ರೋಗಿಗಳನ್ನು ವಿಚಾರಿಸಿದ್ದೇನೆ, ಯಾರೂ ಲಂಚದ ಬಗ್ಗೆ ದೂರು ನೀಡಿಲ್ಲ. ಸೂಕ್ತ ಸಾಕ್ಷ್ಯಗಳಿಲ್ಲದೆ ಕರ್ತವ್ಯನಿರತ ವೈದ್ಯರ ಮೇಲೆ ಆರೋಪ ಮಾಡುವುದು ಸರಿಯಲ್ಲ. ಇದರಿಂದ ಪ್ರಾಮಾಣಿಕವಾಗಿ ಕೆಲಸ ಮಾಡುವ ವೈದ್ಯರ ಮನೋಬಲ ಕುಸಿಯುತ್ತದೆ,” ಎಂದರು.
​ಇದೇ ವೇಳೆ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಹುದ್ದೆ ಭರ್ತಿ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಭರವಸೆ ನೀಡಿದರು. ಅಲ್ಲದೆ, ಧಾರವಾಡದಲ್ಲಿ ಜೈಲಿನಲ್ಲಿದ್ದುಕೊಂಡು ಮಹಿಳೆಯರಿಗೆ ಕಿರುಕುಳ ನೀಡುವ ಪ್ರಕರಣಗಳಲ್ಲಿ ಮೊಬೈಲ್ ಒದಗಿಸಿದ ಅಧಿಕಾರಿಗಳ ವಿರುದ್ಧ ಗೃಹ ಸಚಿವರಿಗೆ ವರದಿ ಸಲ್ಲಿಸುವುದಾಗಿ ಅವರು ತಿಳಿಸಿದರು.

ನಂತರ ಗಚ್ಚಿನಮಟ್ಟದ ಆವರಣದಲ್ಲಿ ಹಮ್ಮಿಕೊಂಡಿದ್ದ ಭರವಸೆಯ ಬೆಳಕು ಫೌಂಡೇಶನ್ ವತಿಯಿಂದ ಅಯೋಜಿಸಿದ ಕಾರ್ಯಕ್ರಮದಲ್ಲಿ ಮಹಿಳೆಯರು ಸಾಲು ಸಾಲು ಸಮಸ್ಯೆಗಳನ್ನು ತೋಡಿಕೊಂಡರು,
ಮಹಿಳಾ ಆಯೋಗದ ಅಧ್ಯಕ್ಷರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳನ್ನು ಕರೆಸಿ ಕೆಲವರಿಗೆ ಮಾರ್ಗದರ್ಶನ ನೀಡಿದರೆ ಇನ್ನೂ ಕೆಲವರನ್ನು ಕಾನೂನಿನ ಪಾಠವನ್ನು ಮಾಡಿದರು, ಶಾಸಕ ಲಕ್ಷ್ಮಣ ಸವದಿ ಕ್ಷೇತ್ರದಲ್ಲಿ ಮಹಿಳಾ ಆಯೋಗದ ಅಧ್ಯಕ್ಷರ ಮುಂದೆ ಮಹಿಳೆಯರು ಸರತಿ ಸಾಲಿನಲ್ಲಿ ನಿಂತು ಸಮಸ್ಯೆಗಳನ್ನು ತೋಡಿಕೊಳ್ಳುವ ದೃಶ್ಯ ಸಾಮಾನ್ಯವಾಗಿತ್ತು.

ಅಥಣಿ ಘಟಕದ ವಿದ್ಯುತ್ ಇಲಾಖೆಯಲ್ಲಿ ಆಗಿರುವ ಭ್ರಷ್ಟಾಚಾರ ಆರೋಪದ ಬಗ್ಗೆ ರೈತ ಮಹಿಳೆಯರು ಇಲಾಖೆಗೆ ಮಾಹಿತಿ ಕೇಳಿದಕ್ಕೆ, ವಿದ್ಯುತ್ ಇಲಾಖೆ ಅಧಿಕಾರಿ ಸಂಪಣ್ಣವರ ಮಾತು ಕೇಳಿ ಪಿಎಸ್ಐ ರೈತ ಮಹಿಳೆ ಮೇಲೆ ದೂರು ದಾಖಲಿಸಿಕೊಂಡಿರುವ ವಿಚಾರ ಮಹಿಳಾ ಆಯೋಗದ ಅಧ್ಯಕ್ಷರ ಗಮನಕ್ಕೆ ಬರುತ್ತಿದ್ದಂತೆ, ಅಥಣಿ ಪಿಎಸ್ಐ ಉಪ್ಪಾರ್ ಅವರಿಗೆ ಕೆಲವು ನಿಮಿಷ ಕಾನೂನಿನ ಪಾಠವನ್ನು ಮಾಡಿ ಸಭೆಯ ಗಮನವನ್ನು ಸೆಳೆದರು.

Hot this week

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

Topics

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಹೆಚ್.ಡಿ. ಕುಮಾರಸ್ವಾಮಿ ಆರೋಪ

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಹೆಚ್.ಡಿ. ಕುಮಾರಸ್ವಾಮಿ ಆರೋಪ ಅಹಿಂದ ಹೆಸರಿನಲ್ಲಿ ನಿರಂತರವಾಗಿ...
spot_img

Related Articles

Popular Categories

spot_img